ರಾಜ್ಯ

ಬೆಂಗಳೂರು: ಕೋಪದ ಭರದಲ್ಲಿ ಮಗನನ್ನೇ ಗುಂಡಿಟ್ಟು ಕೊಂದ ತಂದೆ!

ವ್ಯಕ್ತಿಯೊಬ್ಬ ಕೋಪದ ಭರದಲ್ಲಿ ತನ್ನ ಮಗನನ್ನೇ ಗುಂಡಿಟ್ಟು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ನಡೆದಿದೆ. ಮೃತರನ್ನು ಕರೆಕಲ್ಮನೆ ನಿವಾಸಿ 32 ವರ್ಷದ ನರ್ತನ್ ಬೋಪಣ್ಣ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: ಕೋಪದ ಭರದಲ್ಲಿ ಮಗನನ್ನೇ ಗುಂಡಿಟ್ಟು ಕೊಂದ ತಂದೆ!
ಪಾಪಿ ತಂದೆ ಸುರೇಶ್ ಮತ್ತು ಮೃತ ನರ್ತನ್ ಚಿತ್ರ
Published On :

ಬೆಂಗಳೂರು: ವ್ಯಕ್ತಿಯೋರ್ವ ಕೋಪದ ಭರದಲ್ಲಿ ತನ್ನ ಮಗನನ್ನೇ ಗುಂಡಿಟ್ಟು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ನಡೆದಿದೆ. ಮೃತರನ್ನು ಕರೆಕಲ್ಮನೆ ನಿವಾಸಿ 32 ವರ್ಷದ ನರ್ತನ್ ಬೋಪಣ್ಣ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ವಿಷಯವೊಂದಕ್ಕೆ ನರ್ತನ್ ಮತ್ತು ಅವರ ತಂದೆ ಸುರೇಶ್ ನಡುವೆ ಜಗಳ ಉಂಟಾಗಿದೆ. ಈ ಸಂದರ್ಭದಲ್ಲಿ ಕೋಪದ ಭರದಲ್ಲಿ ತಂದೆ ಮಗನನ್ನು ಹತೈಗೆದಿದ್ದಾರೆ. ಗುಂಡಿನ ಸದ್ದು ಕೇಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ನರ್ತನ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದರಿಂದ ಆತ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸುರೇಶನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.