ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದ ಖೋಡೆ ವೃತ್ತದಲ್ಲಿ ಇಂದು ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ತಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.
ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಕರೆ ನೀಡಿದರು.
ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು ಎಂದರು.
ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು, ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ಮುಖ್ಯಮಂತ್ರಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


