ಬೆಂಗಳೂರು: ಪ್ರೀಸ್ಕೂಲ್ ಕಟ್ಟಡದಿಂದ ಬಿದಿದ್ದ ನಾಲ್ಕು ವರ್ಷದ ಮಗು ಸಾವು!
ಫ್ರಿಸ್ಕೂಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೆಳ್ಳೆಕೆರೆಯಲ್ಲಿ ನಡೆದಿದೆ. ಜನವರಿ 22 ರಂದು ಆಟವಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಗಿಯನ್ನಾ ಆನ್ ಜಿಟೊವನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರು: ಫ್ರಿಸ್ಕೂಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೆಳ್ಳೆಕೆರೆಯಲ್ಲಿ ನಡೆದಿದೆ. ಜನವರಿ 22 ರಂದು ಆಟವಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಗಿಯನ್ನಾ ಆನ್ ಜಿಟೊವನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗಿಯಾನ್ನಾ ಕೇರಳದ ಜಿಟೋ ಟೋಮಿ ಜೋಸೆಫ್ ಮತ್ತು ಬಿನಿಟ್ಟಾ ಥಾಮಸ್ ದಂಪತಿಯ ಪುತ್ರಿ. ದಂಪತಿ ಸಾಫ್ಟ್‌ವೇರ್ ವೃತ್ತಿಪರರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ ತನಿಖೆ ನಡೆಸಲಾಗುತ್ತಿದೆ.
ಬಾಲಕಿ ಗೋಡೆ ಹತ್ತಿ ಕೆಳಗೆ ಬಿದ್ದ ನಂತರವೂ ಶಾಲೆಯ ಅಧಿಕಾರಿಗಳು ಗಮನಕ್ಕೆ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಘಟನೆಗೆ ನಿಜವಾದ ಕಾರಣವನ್ನು ಅಧಿಕಾರಿಗಳು ಮುಚ್ಚಿಡಲು ಪ್ರಯತ್ನಿಸಿದ್ದಾರೆ. ಬಾಲಕಿ ಡೇಕೇರ್‌ನಲ್ಲಿ ಗೋಡೆಗೆ ಡಿಕ್ಕಿ ಹೊಡೆದು ಕೆಳಗೆ ಬಿದಿದ್ದು, ವಾಂತಿ ಮಾಡಿಕೊಂಡಿದ್ದಾಳೆ. ನಂತರ ಶಾಲೆಯವರು ಮೂರನೇ ಮಹಡಿಯಿಂದ ಬಿದ್ದಿದ್ದಾಳೆ ಎಂದು ಒಪ್ಪಿಕೊಳ್ಳಲು ಮುಂದೆ ಬಂದರು ಎಂದು ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.
ಗಿಯಾನಾ ಪ್ರತಿಭಾನ್ವಿತ ಬಾಲಕಿಯಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಸಂಗೀತ ಸಂಯೋಜನೆ, ಗಾಯನದಲ್ಲಿ ತುಂಬಾ ಆಸಕ್ತಿ ಹೊಂದಿದ್ದಳು. ಆಕೆ ಎತ್ತರ ಪ್ರದೇಶ ಹೋಗಲು ಹೆದರುತ್ತಿದ್ದಳು. ಟೆರೇಸ್‌ಗೆ ಹೋಗಿರುವ ಸಾಧ್ಯತೆಯಿಲ್ಲ ಎಂದು ಕುಟುಂಬದವರು ಹೇಳಿಕೊಂಡಿದ್ದಾರೆ. ಈ ಸಂಬಂಧ ಶಾಲೆ ಹಾಗೂ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ತನಿಖೆ ಕೈಗೊಂಡಿದ್ದಾರೆ. ಸ್ಕೂಲ್ ನಲ್ಲಿ ಬಾಲಕಿ ಕೆಳಗೆ ಬಿದ್ದಾಗ ಶಾಲೆಯ ಮಹಿಳಾ ಸಹಾಯಕರು ಇತರ ಮಕ್ಕಳಿಗೆ ಆಹಾರ ಮತ್ತು ಆರೈಕೆಯಲ್ಲಿ ನಿರತರಾಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


