ಬೆಂಗಳೂರು: ಅಪ್ರಾಪ್ತ ಬಾಲಕನಿಂದ 12.46 ಲಕ್ಷ ಮೌಲ್ಯದ ಚಿನ್ನದ ಬಿಸ್ಕೆಟ್ ವಶ!
ತಾನು ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಳಿಯಿಂದ 12.46 ಲಕ್ಷ ರೂಪಾಯಿ ಮೌಲ್ಯದ ಎರಡು ಚಿನ್ನದ ಬಿಸ್ಕತ್‌ಗಳನ್ನು ಕದ್ದೊಯ್ದ ಅಪ್ರಾಪ್ತ ಬಾಲಕನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಬಂಧಿಸಿದ್ದಾರೆ.

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಳಿಯಿಂದ 12.46 ಲಕ್ಷ ರೂಪಾಯಿ ಮೌಲ್ಯದ ಎರಡು ಚಿನ್ನದ ಬಿಸ್ಕತ್‌ಗಳನ್ನು ಕದ್ದೊಯ್ದ ಅಪ್ರಾಪ್ತ ಬಾಲಕನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಬಂಧಿಸಿದ್ದಾರೆ.
ಚಿನ್ನದ ಬಿಸ್ಕೆಟ್ ಜೊತೆ ಗುರುವಾರ ಬೆಂಗಳೂರು ಬಿಟ್ಟು ಹೊರಡಲು ಪ್ಲಾನ್ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಾಲಕ ತನ್ನ ಪಾದರಕ್ಷೆಯಲ್ಲಿ ಬಿಸ್ಕೆಟ್‌ಗಳನ್ನು ಬಚ್ಚಿಟ್ಟಿದ್ದ.
ಸಿಐಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ದೀಪಕ್ ತನ್ವರ್ ನೀಡಿದ ದೂರಿನ ಮೇರೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನನ್ನು ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ.
ಬಾಲಕ ರಾಜಸ್ಥಾನ ಮೂಲದವನಾಗಿದ್ದು, ಜನವರಿ 25 ರಂದು ಇಂಡಿಗೋ ಫ್ಲೈಟ್ (6E 586) ಮೂಲಕ ಅಹಮದಾಬಾದ್‌ಗೆ ತೆರಳಲು ಪ್ಲಾನ್ ಮಾಡಿದ್ದನು. ಮುಂಜಾನೆ 1.15 ರ ಸುಮಾರಿಗೆ ಭದ್ರತಾ ತಪಾಸಣೆಯ ಸಮಯದಲ್ಲಿ, ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್ ಅಲಾರಾಂ ಹೊಡೆಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


