ರಾಜ್ಯ

ಬೆಂಗಳೂರು: ಕುಡಿದು ಬಸ್ ಚಲಾಯಿಸಿದ 9 ಮಂದಿ ಚಾಲಕರ ವಿರುದ್ಧ ಪ್ರಕರಣ ದಾಖಲು

ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ ನಗರದಲ್ಲಿ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ಕುಡಿದು ಖಾಸಗಿ ಬಸ್ ಚಾಲನೆ ಮಾಡುತ್ತಿದ್ದ 9 ಮಂದಿ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಕುಡಿದು ಬಸ್ ಚಲಾಯಿಸಿದ 9 ಮಂದಿ ಚಾಲಕರ ವಿರುದ್ಧ ಪ್ರಕರಣ ದಾಖಲು
ಸಂಗ್ರಹ ಚಿತ್ರ
Published On :

ಬೆಂಗಳೂರು: ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ ನಗರದಲ್ಲಿ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ಕುಡಿದು ಖಾಸಗಿ ಬಸ್ ಚಾಲನೆ ಮಾಡುತ್ತಿದ್ದ 9 ಮಂದಿ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಆನಂದ್ ರಾವ್ ವೃತ್ತ, ಮೌರ್ಯ ವೃತ್ತ, ಕಪಾಲಿ ರಸ್ತೆ, ಗಾಂಧಿ ನಗರ ಸೇರಿದಂತೆ ಖಾಸಗಿ ಬಗ್ ಗಳು ಹೆಚ್ಚಾಗಿ ಓಡಾಡುವ ವಿವಿಧ ಸ್ಥಳಗಳಲ್ಲಿ  ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ 8 ಗಂಟೆಯಿಂದ 11.30ರವರೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಈ ವೇಳೆ 881 ಖಾಸಗಿ ಬಸ್ ಗಳ ಚಾಲಕರನ್ನು ತಪಾಸಣೆ ನಡೆಸಿದಾಗ 9 ಮಂದಿ ಚಾಲಕರು ಮದ್ಯ ಸೇವಿಸಿ ಬಸ್ ಚಾಲನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಚಾಲಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಚಾಲನಾ ಪರವಾನಗಿ ಅಮಾನತು ಸೇರಿದಂತೆ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚೆಗಷ್ಟೇ ಸಂಚಾರಿ ಪೊಲೀಸರು ಶಾಲಾ ಬಸ್ ಚಾಲಕರು ಕುಡಿದು ವಾಹನ ಚಲಾಯಿಸುವವರ ವಿರುದ್ಧವೂ ಕ್ರಮ ಕೈಗೊಂಡಿದ್ದರು, 16 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.