ಬಾಗಲಕೋಟೆ: ಶಾಲಾ ವಾರ್ಷಿಕೋತ್ಸವ ಮುಗಿಸಿ ವಾಪಸಾಗುವ ವೇಳೆ ಅಪಘಾತ; 4 ವಿದ್ಯಾರ್ಥಿಗಳ ದಾರುಣ ಸಾವು
ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ.

ಬಾಗಲಕೋಟೆ: ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ.
ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಎಂಟಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಶ್ವೇತಾ ಪಾಟೀಲ (16), ಸಾಗರ ಕಡಕೋಳ (17), ಗೋವಿಂದ ಜಂಬಗಿ (13), ಬಸವರಾಜ್ ಕೊಟಗಿ (17) ಮೃತಪಟ್ಟ ವಿದ್ಯಾರ್ಥಿಗಳು.
ಅಲಗೂರು ಗ್ರಾಮದ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿ ವಾಪಸ್ ಊರಿಗೆ ಮರಳುತ್ತಿದ್ದಾಗ ತಡರಾತ್ರಿ 12 ಗಂಟೆಯ ಸುಮಾರಿಗೆ ಅಪಘಾತವಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬೆಳ್ತಂಗಡಿ: ಸಿಡಿಮದ್ದು ಘಟಕದಲ್ಲಿ ಸ್ಫೋಟ: ಮೂವರು ಸಾವು
ಕಾರ್ಯಕ್ರಮ ಮುಗಿಸಿ ಕವಟಗಿ ಗ್ರಾಮದ ಕಡೆ ಹೊರಟಿದ್ದಾಗ ಎದುರಿನಿಂದ ಬಂದ ಟ್ರ್ಯಾಕ್ಟರಿಗೆ ಶಾಲಾ ವಾಹನ ಡಿಕ್ಕಿಯಾಗಿದೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


