ರಾಜ್ಯ

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ: ಗೃಹ ಸಚಿವ ಪರಮೇಶ್ವರ್

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ: ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಪರಮೇಶ್ವರ್
Published On :

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ‌ ನೀಡಿರಲಿಲ್ಲ. ಹಾಗಾಗಿ ಪಂಚಾಯಿತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದಾರೆಂದು ಹೇಳಿದರು.

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ. ಇದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸರ್ಕಾರಿ ಕಟ್ಟಡಗಳ ಬದಲಿಗೆ ದೇವಸ್ಥಾನಗಳು ಮತ್ತು ಖಾಸಗಿ ಸ್ಥಳಗಳಲ್ಲಿ ಜನರು ಕೇಸರಿ ಧ್ವಜ ಹಾರಿಸಲಿ. ಅದಕ್ಕೆ ಯಾವುದೇ ತಕರಾರು ಇರುವುದಿಲ್ಲ. ಆದರೆ, ಸರ್ಕಾರಿ ಜಾಗದಲ್ಲಿ ಹಾರಿಸಬಾರದು. ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕಾಂಗ್ರೆಸ್‌ನವರು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ನಾವು ಕೂಡ ಹಿಂದೂಗಳೇ, ಕಾನೂನಿನ ಚೌಕಟ್ಟಿನಲ್ಲಿರಿ ಎಂದು ನಾವು ಹೇಳುತ್ತಿದ್ದೇವೆ. ಅಷ್ಟೇ ವ್ಯತ್ಯಾಸ ನಮಗೂ, ಅವರಿಗೂ. ಈ ರಾಜ್ಯದಲ್ಲಿ ಕಾನೂನಿದೆ, ಕಾನೂನನ್ನ ಮುರಿಯುವ ಕೆಲಸ ಮಾಡಬೇಡಿ ಎಂದು ನಾವು ಹೇಳುತ್ತಿದ್ದೇವೆ. ಅವರು ರಾಜಕೀಯ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಕೂಡ ಅಂಥದ್ದೇ ಒಂದು ಘಟನೆ. ಅದು ಪೂರ್ವನಿಯೋಜಿತನೋ, ಏನೋ ಅನ್ನೋದು ನನಗೆ ಗೊತ್ತಿಲ್ಲ. ಅವರು ಅನುಮತಿ ಪಡೆದಿದ್ದೆ ಬೇರೆಯದಕ್ಕೆ, ಮಾಡಿದ್ದೆ ಬೇರೆ ಎಂದು ಹೇಳಿದರು.

ರಾಷ್ಟ್ರಧ್ವಜ ಹಾಕುತ್ತೇವೆ ಎಂದು ಊರಿನವರೆಲ್ಲ ಹೇಳಿದ್ದು ಒಳ್ಳೆಯದೇ. ಆದರೆ ನಂತರ ಬೇರೆಯ ಧ್ವಜವನ್ನ ಹಾಕಿದ್ದಾರೆ. ಅದಾದ ಬಳಿಕ ಬೇರೆ ಬೇರೆಯವರು ಬೇರೆ ಧ್ವಜ ಹಾಕುತ್ತೇವೆ ಎಂದು ಹೇಳಿದ್ದಾರೆ. ಕೆಲವರು ಅಂಬೇಡ್ಕರ್, ಕೆಲವರು ಕೆಂಪೇಗೌಡ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಶಾಂತಿ ಕದಡುವ ಕೆಲಸ ಆಗಬಾರದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.