ಯಾದಗಿರಿ: ಮಾಜಿ ಶಾಸಕ ನಾಗನಗೌಡ ಕಂದಕೂರ ಹೃದಯಾಘಾತದಿಂದ ನಿಧನ
ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆ: ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಯಾದಗಿರಿ ನಗರದ ಅವರ ನಿವಾಸದಲ್ಲಿದ್ದಾಗ ಭಾನುವಾರ ಬೆಳಿಗ್ಗೆ 11-30ರ ವೇಳೆಗೆ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರು. 'ಆದರೆ, ಅವರು ಉಳಿಯಲಿಲ್ಲ' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ, ಪುತ್ರರಾದ ಶಾಸಕ ಶರಣಗೌಡ ಕಂದಕೂರ, ಉದ್ಯಮಿ ಮಲ್ಲಿಕಾರ್ಜುನರೆಡ್ಡಿ (ರಾಜುಗೌಡ) ಹಾಗೂ ಒಬ್ಬ ಪುತ್ರಿ ಇದ್ದಾರೆ.
ಇದನ್ನೂ ಓದಿ: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ
ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನಾಗನಗೌಡ ಕಂದಕೂರ್ ಅವರು 2018ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 023ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ನಂತರ ಅವರ ಪುತ್ರ ಶರಣಗೌಡ ಕಂದಕೂರ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಗುರುಮಿಠಕಲ್ ಕ್ಷೇತ್ರದ ಶಾಸಕರಾಗಿ ಶರಣಗೌಡ ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


