ಬೆಂಗಳೂರು: ವಿಮಾನ ಟೇಕಾಫ್ ಗೂ ಮುನ್ನ 'ಬಾಂಬ್' ಪದ ಬಳಸಿದ ವ್ಯಕ್ತಿ ಪೊಲೀಸ್ ವಶಕ್ಕೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹೊರಡುವುದಕ್ಕೆ ಕೆಲವೇ ಕ್ಷಣಗಳ ಮುನ್ನ, ನಾನೇನು ಬಾಂಬ್ ಅಥವಾ ಚಾಕು ಹೊತ್ತೊಯ್ಯುತ್ತಿದ್ದೇನೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಲಾಗಿದೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹೊರಡುವುದಕ್ಕೆ ಕೆಲವೇ ಕ್ಷಣಗಳ ಮುನ್ನ, ನಾನೇನು ಬಾಂಬ್ ಅಥವಾ ಚಾಕುವನ್ನು ಹೊತ್ತೊಯ್ಯುತ್ತಿದ್ದೇನೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಲಾಗಿದೆ.
ಕಳೆದ ಭಾನುವಾರ ಭದ್ರತಾ ತಪಾಸಣೆ ಎಲ್ಲ ಮುಗಿದು ವಿಮಾನದಲ್ಲಿ ಕುಳಿತ ನಂತರವೂ ವಿಮಾನದೊಳಗಿನ ಹೆಚ್ಚುವರಿ ತಪಾಸಣೆಯಿಂದ ಸಿಟ್ಟಿಗೆದ್ದ ಕೊಚ್ಚಿಗೆ ತೆರಳುತ್ತಿದ್ದ ಪ್ರಯಾಣಿಕ ಸಜು ಕೆ ಕುಮಾರನ್ ಅವರು ನಾನೇನು ಬಾಂಬ್ ಅಥವಾ ಚಾಕು ಹೊತ್ತೊಯ್ಯುತ್ತಿದ್ದೇನೆಯೇ? ಎಂದು ಪ್ರಶ್ನಿಸಿದ್ದಾರೆ.
ಇದರಿಂದ 38 ವರ್ಷದ ಸಜು ಅವರನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಏರ್‌ಪೋರ್ಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.
"ಸಜು ಕುಟುಂಬದಲ್ಲಿ ಸಾವು ಸಂಭವಿಸಿದೆ. ಹೀಗಾಗಿ ತರಾತುರಿಯಲ್ಲಿ ಊರಿಗೆ ತೆರಳಲು ಆರೋಪಿ ವಿಮಾನ ಪ್ರಯಾಣ ಆಯ್ಕೆ ಮಾಡಿಕೊಂಡಿದ್ದ. ವಿಮಾನ ನಿಲ್ದಾಣದಲ್ಲಿ ನಿಯಮಿತ ತಪಾಸಣೆಯ ನಂತರ ಸಜು ಕೆ ಕುಮಾರನ್‌ಗೆ ವಿಮಾನ ಹತ್ತಲು ಅನುಮತಿಸಲಾಯಿತು. ಆದರೆ ಭದ್ರತಾ ಸಿಬ್ಬಂದಿ ಮತ್ತೆ ಅವರ ಬ್ಯಾಗ್ ಅನ್ನು ಪರಿಶೀಲಿಸಲು ಬಯಸಿದ್ದರಿಂದ ಅವರು ಆಕ್ರೋಶದಿಂದ ಹಾಗೆ ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ತನಿಖೆಗೆ ಅವರ ಉಪಸ್ಥಿತಿಯ ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


