ರಾಜ್ಯದಿಂದ ಹಜ್ ಯಾತ್ರೆಗೆ 10,500 ಮಂದಿ ಆಯ್ಕೆ
ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ಭಾರತದ ಹಜ್ ಸಮಿತಿಯು ರಾಜ್ಯದಿಂದ 10,500 ಮಂದಿಯನ್ನು ಆಯ್ಕೆ ಮಾಡಿದೆ.

ಬೆಂಗಳೂರು: ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ಭಾರತದ ಹಜ್ ಸಮಿತಿಯು ರಾಜ್ಯದಿಂದ 10,500 ಮಂದಿಯನ್ನು ಆಯ್ಕೆ ಮಾಡಿದೆ.
ಕರ್ನಾಟಕ ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಜ್ ಖಾನ್ ಮಾತನಾಡಿ, ಕಳೆದ ವರ್ಷ 7,500 ಅರ್ಜಿಗಳು ಬಂದಿದ್ದವು. ಈ ವರ್ಷ 3,000 ಅರ್ಜಿಗಳು ಹೆಚ್ಚಾಗಿ ಬಂದಿವೆ. ಸಮಿತಿಯು 80,000 ರೂಪಾಯಿಗಳ ಮುಂಗಡ ಪಾವತಿ ಮಾಡುವಂತೆ ಅರ್ಜಿದಾರರಿಗೆ ಸಂದೇಶಗಳನ್ನು ರವಾನಿಸುತ್ತಿದೆ. ಜಿಲ್ಲಾವಾರು ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ಈ ವರ್ಷ ರಾಜ್ಯ ಹಜ್ ಸಮಿತಿಯು ಯಾತ್ರೆಗಾಗಿ 13,500 ಅರ್ಜಿಗಳನ್ನು ಸ್ವೀಕರಿಸಿದ್ದು, ಆದಾಗ್ಯೂ 10,500 ಮಂದಿಯನ್ನು ಮಾತ್ರ ಯಾತ್ರೆಗೆ ಕಳುಹಿಸಲಾಗುತ್ತಿದೆ, ಮೀಸಲಾತಿ ಅಡಿಯಲ್ಲಿ ಈ ಅವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು, ಮಂಗಳೂರು, ಗೋವಾ ಮತ್ತು ಹೈದರಾಬಾದ್‌ಗಳನ್ನು ಕರ್ನಾಟಕ ಮೂಲದ ಯಾತ್ರಾರ್ಥಿಗಳಿಗೆ ಎಂಬಾರ್ಕೇಶನ್ ಪಾಯಿಂಟ್‌ಗಳಾಗಿ ಗುರುತಿಸಲಾಗಿದ್ದು, ಸಮಿತಿಯು ರಾಜ್ಯಕ್ಕೆ ಎಂಬಾರ್ಕೇಶನ್ ಪಾಯಿಂಟ್‌ಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ . ಯಾತ್ರಾರ್ಥಿಗಳಿಗೆ ವಿಮಾನಗಳನ್ನು ನಿರ್ವಹಿಸಲು ವಿಮಾನಯಾನ ಸಂಸ್ಥೆಗಳಿಗೆ ಟೆಂಡರ್‌ಗಳನ್ನು ಕರೆಯಲು ಸಿದ್ಧತೆಗಳನ್ನು ಸಮಿತಿ ನಡೆಸುತ್ತಿದೆ. ಉತ್ತಮ ದರ ನೀಡುವವರನ್ನು ವಿಮಾನಯಾನ ಸಂಸ್ಥೆಗಳನ್ನು ಇಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


