ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಡಾ. ಸೂರಜ್ ರೇವಣ್ಣ ಮತ್ತೆ ಎರಡು ದಿನ ಸಿಐಡಿ ಪೊಲೀಸ್ ಕಸ್ಟಡಿಗೆ!
ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಜೂನ್ 22ರಂದು ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು.

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ಸಿಐಡಿ ಪೊಲೀಸ್ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಡಾ. ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಕೊನೆಗೊಂಡಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಐದು ದಿನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಜೂನ್ 22ರಂದು ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು.
ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಸೂರಜ್ ಅವರನ್ನು ಹಾಜರುಪಡಿಸಲಾಗಿತ್ತು. ಹೀಗಾಗಿ ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



