ಬೆಂಗಳೂರು: ಕಾಣೆಯಾಗಿದ್ದ ಮಡಿವಾಳ ಠಾಣೆ ಪೊಲೀಸ್ ಪೇದೆ ಜ್ಞಾನಭಾರತಿಯಲ್ಲಿ ಶವವಾಗಿ ಪತ್ತೆ!
ಜೂನ್ 25 ರಿಂದ ನಾಪತ್ತೆಯಾಗಿದ್ದ ಮಡಿವಾಳ ಠಾಣೆಯ ಪೊಲೀಸ್ ಪೇದೆಯೊಬ್ಬರು ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ತೆರೆದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಬೆಂಗಳೂರು: ಜೂನ್ 25 ರಿಂದ ನಾಪತ್ತೆಯಾಗಿದ್ದ ಮಡಿವಾಳ ಠಾಣೆಯ ಪೊಲೀಸ್ ಪೇದೆಯೊಬ್ಬರು ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ತೆರೆದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ಪೇದೆಯನ್ನು ಶಿವರಾಜ್ ಎಂದು ಗುರುತಿಸಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಶವ ಪತ್ತೆಯಾಗಿದೆ. ಕಾನ್‌ಸ್ಟೆಬಲ್ ನಾಪತ್ತೆಯಾದ ನಂತರ ಅವರ ಸಹೋದರ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮೃತ ಪೇದೆ ಶಿವರಾಜ್ ಕುಟುಂಬ ಇದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿತ್ತು.
ಶಿವರಾಜ್ 50 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಜೂನ್ 25ರಂದು ಕೆಲಸ ನಿಮಿತ್ತ ಮನೆಯಿಂದ ಹೊರಟಿದ್ದರು. ಸ್ವಲ್ಪ ಸಮಯದ ನಂತರ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುವುದು ಕಂಡು ಬಂತು. ಮೃತ ಪೇದೆ ಶಿವರಾಜ್ ರಾಯಚೂರಿನ ದೇವದುರ್ಗ ಮೂಲದವರಾಗಿದ್ದು, 2020ನೇ ಬ್ಯಾಚ್‌ನ ಪೊಲೀಸ್ ಪೇದೆಯಾಗಿದ್ದರು.
ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಶಿವರಾಜ್ ಮನನೊಂದಿದ್ದರು ಎಂದು ತಿಳಿದು ಬಂದಿದೆ. ಸಂಬಂಧಿಯೊಬ್ಬರು ಈತನ ವಿರುದ್ಧ ದಾವಣಗೆರೆಯ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದರು. ಶಿವರಾಜ್ ವಿರುದ್ಧ ದೂರುದಾರರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಇದರಿಂದ ವಿಚಲಿತರಾದ ಅವರು ತಮ್ಮ ಜೀವನವನ್ನು ಅಂತ್ಯಗೊಳಿಸಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



