ಪಶುಸಂಗೋಪನಾ ಸಚಿವರಿಂದ ಕಿರುಕುಳ?: ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ಪಿಎಂ ಪ್ರಸನ್ನ ರಾಜಿನಾಮೆ!
ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ(ಮೈಮುಲ್) ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಪಿ.ಎಂ ಪ್ರಸನ್ನ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಮೈಸೂರು: ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ(ಮೈಮುಲ್) ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಪಿ.ಎಂ ಪ್ರಸನ್ನ ಕುಮಾರ್ ರಾಜೀನಾಮೆ ನೀಡಿದ್ದಾರೆ.
ಪಿ.ಎಂ ಪ್ರಸನ್ನ ಕುಮಾರ್ ಅವರು ಪಿರಿಯಾಪಟ್ಟಣ ಮಾಜಿ ಶಾಸಕ ಕೆ.ಮಹದೇವ ಅವರ ಪುತ್ರರಾಗಿದ್ದು 2021ರಲ್ಲಿ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ. (ಮೈಮುಲ್) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ ಇದೀಗ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗಷ್ಟೇ ಪ್ರಸನ್ನ ಅವರು ಸಚಿವರು ಕಳೆದ 6 ತಿಂಗಳಲ್ಲಿ 24 ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಬಹಿರಂಗವಾಗಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರಸನ್ನ ಅವರು ದಿಢೀರ್ ಅಂತ ತಮ್ಮ ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಈವರೆಗೂ ರಾಜೀನಾಮೆ ಅಂಗೀಕಾರವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



