ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಖಾಸಗಿ ಆಸ್ಪತ್ರೆಗಳ ದುಬಾರಿ ಪರೀಕ್ಷಾ ಶುಲ್ಕಕ್ಕೆ ಕಡಿವಾಣ; ದರ ನಿಗದಿಪಡಿಸಿದ ಸರ್ಕಾರ
ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್ ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಬೆಂಗಳೂರು: ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್ ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗ್ಯೂ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.
ಡೆಂಗ್ಯೂ ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗ್ಯೂ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಡಿನಲ್ಲಿ ಮಹತ್ವದ ಸಭೆ ಕರೆದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಕೈಗೊಂಡಿರುವ ಮುಂಜಾಗೃತ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



