ಮಂಗಳೂರು ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ: ಅವಶೇಷಗಳಡಿ ಸಿಲುಕಿದ ಓರ್ವ ಕಾರ್ಮಿಕನ ರಕ್ಷಣೆ, ಮತ್ತೋರ್ವನಿಗಾಗಿ ಶೋಧ!
ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ. ಈ ಹಿನ್ನಲೆ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಮಂಗಳೂರು: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಬುಧವಾರ ವರದಿಯಾಗಿದೆ.
ಮಂಗಳೂರು(Mangaluru) ನಗರದ ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ. ಈ ಹಿನ್ನಲೆ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಈಗಾಗಲೇ ಮಣ್ಣಿನಡಿಯಲ್ಲಿರುವ ಕಾರ್ಮಿಕರ ಜೊತೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದು, ಅವಶೇಷದಡಿ ಸಿಲುಕಿದ್ದ ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೂಲಗಳ ಪ್ರಕಾರ ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಮಣ್ಣಿನ ದಿಬ್ಬ ಸಡಿಲಗೊಂಡಿದ್ದು, ರಿಟೇನಿಂಗ್ ವಾಲ್ ಹಾಗೂ ಹಾಕಲಾದ ಶೀಟ್‌ಗಳ ಮೇಲೆ ಮಣ್ಣು ಬಿದ್ದಿದೆ. ಇದರಿಂದ ರಿಟೇನಿಂಗ್ ವಾಲ್ ಹಾಗೂ ಶೀಟ್ ಮಧ್ಯೆ ಕಾರ್ಮಿಕರು ಸಿಲುಕಿದ್ದು, ಕೋರ್ ಕಟ್ಟಿಂಗ್ ಮೂಲಕ ರಕ್ಷಣ ಕಾರ್ಯ ನಡೆಸಲಾಗುತ್ತಿದೆ. ಅದರಂತೆ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವನಿಗಾಗಿ ಕಾರ್ಯಾಚರಣೆ ಮುಂದವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಗೆ ಮಳೆ ಅಡ್ಡಿ
ಮಣ್ಣಿನಡಿ ಬಿಹಾರ ಮೂಲದವರಾದ ಚಂದನ್ ಮತ್ತು ರಾಜಕುಮಾರ್ ಎಂಬುವವರು ಸಿಲುಕಿದ್ದರು. ಈ ಪೈಕಿ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಸ್ಟ್ರೆಚ್ಚರ್ ಜೊತೆ ಆಗಮಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಓರ್ವ ಕಾರ್ಮಿಕನನ್ನು ಮೇಲೆ ಎತ್ತುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನುಳಿದ ಓರ್ವನಿಗಾಗಿ ಕಾರ್ಯಾಚರಣೆ ಶುರುವಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



