ಮಂಗಳೂರು: ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಓರ್ವ ಸಾವು; ಗುತ್ತಿಗೆದಾರ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್
ಬುಧವಾರ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕ ಚಂದನ್ ಕುಮಾರ್ ಎಂಬಾತ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ.

ಮಂಗಳೂರು: ಕಟ್ಟಡ ನಿರ್ಮಾಣ ಸ್ಥಳದಲ್ಲಿ ಸಂಭವಿಸಿದ ಮಣ್ಣು ಕುಸಿತ ದುರ್ಘಟನೆಯಲ್ಲಿ ಕಾರ್ಮಿಕನೋರ್ವ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಮಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಯೋಜನೆಯ ಗುತ್ತಿಗೆದಾರ ವೇಣುಗೋಪಾಲ್ ಮತ್ತು ಇತರ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬುಧವಾರ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕ ಚಂದನ್ ಕುಮಾರ್ ಎಂಬಾತ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ. ಘಟನೆಗೆ ಕಾರಣ ಪತ್ತೆ ಹಚ್ಚಲು ಇನ್ನೂ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಚಂದನ್ ಕುಮಾರ್ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದೆ. ಮೃತರ ಕುಟುಂಬಕ್ಕೆ ಗುತ್ತಿಗೆದಾರರು ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಕಾರ್ಮಿಕರ ಕುಟುಂಬಗಳಿಗೆ ಕಾರ್ಮಿಕ ಪರಿಹಾರ ಕಾಯ್ದೆಯಡಿ ವಿಮೆ ಸಿಗಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



