ರಾಜ್ಯ

ನಮ್ಮ ಮೆಟ್ರೋ: ಜುಲೈ 6 ರಿಂದ ನೇರಳೆ ಮಾರ್ಗದ ವೇಳಾಪಟ್ಟಿಯಲ್ಲಿ ಬದಲಾವಣೆ; ಮೆಜೆಸ್ಟಿಕ್‌ನಿಂದ ಹೆಚ್ಚುವರಿ ಮೆಟ್ರೋ ರೈಲುಗಳ ಸಂಚಾರ!

ನಾಡಪ್ರಭು ಕೆಂಪೇಗೌಡ ನಿಲ್ದಾಣ - ಮೆಜೆಸ್ಟಿಕ್ ನಿಂದ ಪ್ರಸ್ತುತ ಒಂಬತ್ತು ರೈಲುಗಳ ಬದಲಾಗಿ ಹದಿನೈದು ರೈಲುಗಳು ಹೊರಡಲಿವೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ವರೆಗೆ, ನಾಲ್ಕು ವೈಟ್‌ಫೀಲ್ಡ್‌ವರೆಗೆ ಮತ್ತು ಒಂದು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸಲಿವೆ.

ನಮ್ಮ ಮೆಟ್ರೋ: ಜುಲೈ 6 ರಿಂದ ನೇರಳೆ ಮಾರ್ಗದ ವೇಳಾಪಟ್ಟಿಯಲ್ಲಿ ಬದಲಾವಣೆ; ಮೆಜೆಸ್ಟಿಕ್‌ನಿಂದ ಹೆಚ್ಚುವರಿ ಮೆಟ್ರೋ ರೈಲುಗಳ ಸಂಚಾರ!
ನಮ್ಮ ಮೆಟ್ರೋ
Published On :

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದ ವೇಳಾಪಟ್ಟಿಯನ್ನು ನಾಳೆಯಿಂದ ಪರಿಷ್ಕರಿಸಲಾಗಿದ್ದು,ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲುಗಳ ಸಂಚಾರ ಆರಂಭವಾಗುತ್ತಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ - ಮೆಜೆಸ್ಟಿಕ್ ನಿಂದ ಪ್ರಸ್ತುತ ಒಂಬತ್ತು ರೈಲುಗಳ ಬದಲಾಗಿ ಹದಿನೈದು ರೈಲುಗಳು ಹೊರಡಲಿವೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ವರೆಗೆ, ನಾಲ್ಕು ವೈಟ್‌ಫೀಲ್ಡ್‌ವರೆಗೆ ಮತ್ತು ಒಂದು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸಲಿವೆ ಬಿಎಂಆರ್ ಸಿಎಲ್ ಶುಕ್ರವಾರ ಪ್ರಕಟಿಸಿದೆ.

ಬೆಳಗಿನ ಸಮಯದಲ್ಲಿ 8.48, 8.58, 9.08, 9.18, 9.29, 9.39, 9.50, 10.00, 10.11, 10.19, 10.21, 10.21, 10,39,10. 50, 11.00, 11. 11, 11.22 ಕ್ಕೆ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಪೂರ್ವದ ಕಡೆಗೆ ರೈಲುಗಳು ಹೊರಡಲಿವೆ. ಹೆಚ್ಚುವರಿಯಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ ಪ್ರತಿ 3.3 ನಿಮಿಷಗಳಿಗೆ ಒಂದರಂತೆ ಹಾದು ಹೋಗುವ ರೈಲುಗಳು ಸಹ ಬೆಳಗ್ಗೆ 10-25ರವರೆಗೂ ನಿಯಮಿತವಾಗಿ ಲಭ್ಯವಿರುತ್ತವೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಪ್ರಯಾಣಿಕರ ನಿರಂತರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ವೈಟ್‌ಫೀಲ್ಡ್ ಕಡೆಗೆ ವಿಸ್ತರಿಸಲಾಗಿದೆ.

ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು ಪ್ರತಿ 3.5 ನಿಮಿಷಗಳಿಗೆ ಒಂದಂರಂತೆ ಲಭ್ಯವಿರುತ್ತದೆ.

ಸಂಜೆಯ ವೇಳೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಕ್ಕೆ ಒಂದರಂತೆ ಬೈಯಪ್ಪನಹಳ್ಳಿಯಿಂದ 4-40 ರ ಬದಲಿಗೆ 4-20ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.