ನೂತನ ಉಪಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇಮಕ
ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಸೆಕ್ಷನ್ 3(1)ರ ಅಡಿ ದೊರೆತಿರುವ ಅಧಿಕಾರ ಬಳಸಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ನೇಮಕ ಮಾಡಿರುವುದಾಗಿ ರಾಜ್ಯಪಾಲರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ, ವಿಧಾನಸಭೆ ಸ್ಪೀಕರ್, ಪರಿಷತ್ ಸಭಾಪತಿ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನವರಾದ ವೀರಪ್ಪ, 2023ರ ಮೇ ತಿಂಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



