ರಾಜ್ಯ

ಬೆಂಗಳೂರು: ಬಾಡಿಗೆ ಪಾವತಿಸದ ಬ್ಯಾಂಕ್ ಆಫ್ ಬರೋಡಾ, ಅಂಚೆ ಕಚೇರಿಗೆ ಬೀಗ ಜಡಿದ ಪಾಲಿಕೆ ಅಧಿಕಾರಿಗಳು!

ಬ್ಯಾಂಕ್ ಆಫ್ ಬರೋಡಾ ಡಿಸೆಂಬರ್ 2022 ರಿಂದ ಯಾವುದೇ ಬಾಡಿಗೆಯನ್ನು ಪಾವತಿಸದೇ ಇದ್ದ ಕಾರಣ ಹಲವಾರು ಬಾರಿ ನೋಟೀಸ್ ಜಾರಿ ಮಾಡಿದ್ದರೂ ಕೂಡ ಬಾಡಿಗೆಯನ್ನು ಪಾವತಿಸಿರುವುದಿಲ್ಲ.

ಬೆಂಗಳೂರು: ಬಾಡಿಗೆ ಪಾವತಿಸದ ಬ್ಯಾಂಕ್ ಆಫ್ ಬರೋಡಾ, ಅಂಚೆ ಕಚೇರಿಗೆ ಬೀಗ ಜಡಿದ ಪಾಲಿಕೆ ಅಧಿಕಾರಿಗಳು!
ಅಂಚೆ ಕಚೇರಿ ಮತ್ತು ಬ್ಯಾಂಕ್ ಆಫ್ ಬರೋಡಾ ಕಚೇರಿಗೆ
Published On :

ಬೆಂಗಳೂರು: ನಗರದ ಎಂ.ಜಿ.ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್(ಪಿ.ಯು.ಬಿ) ಕಟ್ಟಡದ ನೆಲ ಅಂತಸ್ತಿನಲ್ಲಿರುವ ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಹಾಗೂ ಅಂಚೆ ಕಛೇರಿಗೆ ಬಾಕಿ ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಲಾಗಿದೆ.

ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) 2011 ರಿಂದ ಹಳೆಯ ಬಾಡಿಗೆಯನ್ನು ಪಾವತಿಸುತ್ತಿದ್ದು, ಪರಿಷ್ಕೃತ ಬಾಡಿಗೆಯನ್ನು ಪಾವತಿಸುತ್ತಿರುವುದಿಲ್ಲ. ಅಲ್ಲದೆ ಡಿಸೆಂಬರ್ 2022 ರಿಂದ ಯಾವುದೇ ಬಾಡಿಗೆಯನ್ನು ಪಾವತಿಸದೇ ಇದ್ದ ಕಾರಣ ಹಲವಾರು ಬಾರಿ ನೋಟೀಸ್ ಜಾರಿ ಮಾಡಿದ್ದರೂ ಕೂಡ ಬಾಡಿಗೆಯನ್ನು ಪಾವತಿಸಿರುವುದಿಲ್ಲ.

ಬ್ಯಾಂಕ್ ಆಫ್ ಬರೋಡಾ ಪಾಲಿಕೆಗೆ 17.56 ಕೋಟಿ ರೂ. ಬಾಡಿಗೆ ಪಾಲಿಕೆಗೆ ಪಾವತಿಸಬೇಕಿದ್ದು, ಈ ಸಂಬಂಧ ಪೂರ್ವ ವಲಯ ಆಯುಕ್ತರ ಆದೇಶದಂತೆ ಇಂದು ಬೆಳಗ್ಗೆ 6.45ರ ಸಮಯದಲ್ಲಿ ಸದರಿ ಮಳಿಗೆಗೆ ಬೀಗಮುದ್ರೆ ಹಾಕಲಾಗಿರುತ್ತದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

* ಪಾವತಿಸಬೇಕಾದ ಬಾಡಿಗೆ ಮೊತ್ತ: 7,61,70,155/-

* ಬಾಕಿ ಸಿ.ಎಸ್.ಟಿ./ಜಿ.ಎಸ್.ಟಿ. ಮೊತ್ತ: 1,25,98,845/-

* ಬಡ್ಡಿ ಮೊತ್ತ: 8,69,22,095/-

* ಒಟ್ಟು ಬಾಕಿ ಮೊತ್ತ: 17,56,91,095/-

ಅಂಚೆ ಕಛೇರಿ: ಅಂಚೆ ಕಛೇರಿ ಇಲಾಖೆಯವರು 2006 ರಿಂದ ಹಳೆಯ ಬಾಡಿಗೆಯನ್ನು ಪಾವತಿಸುತ್ತಿದ್ದು, ಪರಿಷ್ಕೃತ ಬಾಡಿಗೆಯನ್ನು ಪಾವತಿಸುತ್ತಿರುವುದಿಲ್ಲ. ಈ ಬಗ್ಗೆ ಹಲವಾರು ಬಾರಿ ನೋಟೀಸ್ ಜಾರಿ ಮಾಡಿ ಪರಿಷ್ಕೃತ ಬಾಡಿಗೆಯನ್ನು ಪಾವತಿಸುವಂತೆ ಸೂಚಿಸಲಾಗಿದ್ದರೂ ಬಾಡಿಗೆಯನ್ನು ಪಾವತಿಸಿರುವುದಿಲ್ಲ. ಅಂಚೆ ಕಛೇರಿಯಿಂದ 2.32 ಕೋಟಿ ರೂ. ಬಾಡಿಗೆ ಪಾಲಿಕೆಗೆ ಪಾವತಿಸಬೇಕಿದ್ದು, ಈ ಸಂಬಂಧ ಪೂರ್ವ ವಲಯ ಆಯುಕ್ತರ ಆದೇಶದಂತೆ ಇಂದು ಬೆಳಗ್ಗೆ 6.45ರ ಸಮಯದಲ್ಲಿ ಸದರಿ ಮಳಿಗೆಗೆ ಬೀಗಮುದ್ರೆ ಹಾಕಲಾಗಿರುತ್ತದೆ.

* ಪಾವತಿಸಬೇಕಾದ ಬಾಡಿಗೆ ಮೊತ್ತ: 93,27,168/-

* ಬಾಕಿ ಸಿ.ಎಸ್.ಟಿ./ಜಿ.ಎಸ್.ಟಿ. ಮೊತ್ತ 10,09,124/-

* ಬಡ್ಡಿ ಮೊತ್ತ: 1,29,27,119/-

* ಒಟ್ಟು ಬಾಕಿ ಮೊತ್ತ: 2,32,63,410/-

ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಯನ್ನು ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಪೋಲೀಸ್ ಸಿಬ್ಬಂದಿ ಬಂದೋಬಸ್ತ್ ನೊಂದಿಗೆ ಬೀಗಮುದ್ರೆ ಹಾಕಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.