ರಾಜ್ಯ

Road accident: ಶಿವಮೊಗ್ಗದಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ; ಮೂವರು ಸಾವು

ಮೃತರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರಾಗಿದ್ದು, ಶಿವಮೊಗ್ಗದ ಸಿಗಂದೂರಿನಿಂದ ವಾಪಸ್ಸಾಗುತ್ತಿದ್ದರು.

Road accident: ಶಿವಮೊಗ್ಗದಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ; ಮೂವರು ಸಾವು
ಕಾರುಗಳ ಮಧ್ಯೆ ಅಪಘಾತ
Published On :

ಶಿವಮೊಗ್ಗ: ಶಿವಮೊಗ್ಗದಲ್ಲಿ ಶನಿವಾರ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ, ಅವರಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್ ನ ಲಯನ್ ಸಫಾರಿ ಬಳಿ ದುರ್ಘಟನೆ ಸಂಭವಿಸಿದೆ.

ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಇನೋವಾ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡು ಕಾರುಗಳು ತೀವ್ರ ಛಿದ್ರಗೊಂಡಿವೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಐವರಿಗೆ ಗಾಯಗಳಾಗಿವೆ.

ಮೃತರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರಾಗಿದ್ದು, ಶಿವಮೊಗ್ಗದ ಸಿಗಂದೂರಿನಿಂದ ವಾಪಸ್ಸಾಗುತ್ತಿದ್ದರು.

ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕಾರುಗಳ ಭಾಗಗಳನ್ನು ತೆರವು ಮಾಡಲಾಗಿದೆ. ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.