ರಾಜ್ಯ

KRS ಜಲಾಶಯದ ಬಳಿ ಪ್ರಾಯೋಗಿಕ ಸ್ಫೋಟ ಬೇಡ: ಅಧಿಕಾರಿಗಳಿಗೆ ಸರ್ಕಾರ ಸೂಚನೆ

ಕೃಷ್ಣರಾಜ ಸಾಗರ ಜಲಾಶಯದ ಬಳಿ ಜುಲೈ 15ರವರೆಗೆ ಪ್ರಾಯೋಗಿಕ ಸ್ಫೋಟ ನಡೆಸದಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಸೂಚನೆ ನೀಡಿದ್ದಾರೆ.

KRS ಜಲಾಶಯದ ಬಳಿ ಪ್ರಾಯೋಗಿಕ ಸ್ಫೋಟ ಬೇಡ: ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಕೆಆರ್ ಎಸ್ ಡ್ಯಾಂ
Published On :

ಮೈಸೂರು: ಕೃಷ್ಣರಾಜ ಸಾಗರ ಜಲಾಶಯದ ಬಳಿ ಜುಲೈ 15ರವರೆಗೆ ಪ್ರಾಯೋಗಿಕ ಸ್ಫೋಟ ನಡೆಸದಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಶನಿವಾರ ಬೇಬಿಬೆಟ್ಟ ವ್ಯಾಪ್ತಿಯಲ್ಲಿ ಟ್ರಯಲ್‌ ಬ್ಲಾಸ್ಟ್‌ ನಡೆಸುವ ಸಂಬಂಧ ರೈತ ನಾಯಕರೊಂದಿಗೆ ನಡೆದ ಸಭೆಯಲ್ಲಿ ಅಭಿಪ್ರಾಯ ಆಲಿಸಿ ಮಾತನಾಡಿದರು.

ಕೆಆರ್‌ಎಸ್‌ ಅಣೆಕಟ್ಟೆ ಸಂರಕ್ಷಣೆ ಸರಕಾರದ ಹೊಣೆಯಾಗಿದೆ. ಅಣೆಕಟ್ಟೆಗೆ ಅಪಾಯವಾದರೆ ಸಂಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತಿದೆ ಎನ್ನುವುದು ಗೊತ್ತಿದೆ. ಟ್ರಯಲ್‌ ಬ್ಲಾಸ್ಟ್‌ ನಡೆಸುವಂತೆ ಕೋರ್ಟ್‌ ಸೂಚನೆ ನೀಡಿರುವುದರಿಂದ ಅಡ್ವಕೇಟ್‌ ಜನರಲ್‌, ಡ್ಯಾಮ್‌ ಸೇಫ್ಟಿ ಕಮಿಟಿ, ಉನ್ನತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಜುಲೈ 15ರಂದು ಕೋರ್ಟ್‌ಗೆ ಸಮಗ್ರ ಮಾಹಿತಿ ನೀಡಲಾಗುವುದು. ಗೊಂದಲ ಬಗೆಹರಿಯದಿದ್ದರೆ ಮತ್ತೆ ಸಮಯಾವಕಾಶ ಕೇಳಲಾಗುವುದು ಎಂದು ಹೇಳಿದರು.

ರೈತರ ಅಭಿಪ್ರಾಯ ಕುರಿತಂತೆ ಚರ್ಚಿಸಲು ಶೀಘ್ರವೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಆಯೋಜಿಸಲಾಗುವುದು. ಸಭೆಗೆ ಆಯ್ದ ಐದು ಜನ ರೈತ ಮುಖಂಡರನ್ನು ಸಹ ಆಹ್ವಾನಿಸಲಾಗುವುದು. ತಾಂತ್ರಿಕ ಸಮಿತಿ ಹಾಗೂ ಅಕಾರಿಗಳ ಅಭಿಪ್ರಾಯ ಬೇರೆ ಬೇರೆ ಇರುತ್ತದೆ. ಎಲ್ಲ ಸಿದ್ಧತೆ ಮಾಡಿಕೊಂಡು ಕೋರ್ಟ್‌ ಮುಂದೆ ಹೋಗುತ್ತೇವೆ. ಹೀಗಾಗಿ ಜುಲೈ 15 ರವರೆಗೆ ಯಾವುದೇ ಟ್ರಯಲ್‌ ಬ್ಲಾಸ್ಟ್‌ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.