Rat Fever: ಇಲಿ ಜ್ವರಕ್ಕೆ ಹಾವೇರಿಯಲ್ಲಿ ವೃದ್ಧ ಸಾವು!
ನಿನ್ನೆಯಷ್ಟೇ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು. ಈಗ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ.

ಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಜೋರಾಗಿರುವಂತೆಯೇ ಅತ್ತ ಹಾವೇರಿಯಲ್ಲಿ ಇಲಿ ಜ್ವರಕ್ಕೆ ತುತ್ತಾಗಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು.. ನಿನ್ನೆಯಷ್ಟೇ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು. ಈಗ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ.
ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್(72) ಎಂಬ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಉಮೇಶ್ ಅವರು ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ರಕ್ತ ತಪಾಸಣೆ ನಡೆಸಿದಾಗ ಇಲಿ ಜ್ವರ ಇರುವುದು ದೃಢಪಟ್ಟಿತ್ತು. ಇಲಿ ಜ್ವರದ ಜೊತೆ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಹಾವೇರಿ ತಾಲೂಕಿನ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಆದರೆ ಕಳೆದ 2 ದಿನಗಳ ಹಿಂದೆ ಮಂಗಳೂರಿನಲ್ಲಿ ಹಾವೇರಿ ನಿವಾಸಿ ಇಲಿ ಜ್ವರಕ್ಕೆ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



