ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ; 23 ಚಾಲಕರ ವಿರುದ್ಧ ಕೇಸ್ ದಾಖಲು
ಬೆಳಗ್ಗೆ 7 ರಿಂದ 9 ರವರೆಗೆ ನಡೆಸಿದ ವಿಶೇಷ ಅಭಿಯಾನದಲ್ಲಿ ಒಟ್ಟು 3016 ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ 23 ಚಾಲಕರಿಗೆ ಮದ್ಯಪಾನ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುತ್ತಿದ್ದ 23 ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.
ಬೆಳಗ್ಗೆ 7 ರಿಂದ 9 ರವರೆಗೆ ನಡೆಸಿದ ವಿಶೇಷ ಅಭಿಯಾನದಲ್ಲಿ ಒಟ್ಟು 3016 ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ 23 ಚಾಲಕರಿಗೆ ಮದ್ಯಪಾನ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ 23 ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗಿದೆ ಮತ್ತು ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರ ಚಾಲನಾ ಪರವಾನಗಿಯನ್ನು ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ರವಾನಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ(ಸಂಚಾರ) ಎಂ ಎನ್ ಅನುಚೇತ್ ಅವರು ತಿಳಿಸಿದ್ದಾರೆ.
"ವಿಶೇಷ ಚಾಲನೆಯ ಸಂದರ್ಭದಲ್ಲಿ, ಫಿಟ್‌ನೆಸ್ ಪ್ರಮಾಣಪತ್ರವಿಲ್ಲದ 11 ವಾಹನಗಳು ಕಂಡುಬಂದಿದ್ದು, ಮುಂದಿನ ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಆರ್‌ಟಿಒಗಳಿಗೆ ಹಸ್ತಾಂತರಿಸಲಾಗುವುದು.
ವಿದ್ಯಾರ್ಥಿಗಳು ಮತ್ತು ಇತರ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಂತಹ ವಿಶೇಷ ಡ್ರೈವ್‌ಗಳು ನಿಯಮಿತವಾಗಿ ಮುಂದುವರಿಯುತ್ತವೆ" ಎಂದು ಅನುಚೇತ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



