ರಾಜ್ಯ

ಬೆಂಗಳೂರು: ಎಂಜಿ ರಸ್ತೆಯಲ್ಲಿ BMTC ಬಸ್'ಗೆ ಆಕಸ್ಮಿಕ ಬೆಂಕಿ, ತಪ್ಪಿದ ಅನಾಹುತ

ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರು: ಎಂಜಿ ರಸ್ತೆಯಲ್ಲಿ BMTC ಬಸ್'ಗೆ ಆಕಸ್ಮಿಕ ಬೆಂಕಿ, ತಪ್ಪಿದ ಅನಾಹುತ
ಬಸ್'ಗೆ ಬೆಂಕಿ ಹೊತ್ತಿಕೊಂಡಿರುವುದು.
Published On :

ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ನಡೆದಿದೆ. ಬಸ್ ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಎಚ್ಚೆತ್ತ ನಿರ್ವಾಹಕ ಅವರನ್ನು ಕೆಳಕ್ಕಿಳಿಸಿದ್ದಾರೆ.

ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಈ ಘಟನೆಯಿಂದಾಗಿ, ಎಂಜಿ ರಸ್ತೆಯ ಸದಾ ದಟ್ಟ ವಾಹನನಿಬಿಡ ಸ್ಥಳವಾದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್‌ ಅಸ್ತವ್ಯಸ್ತವಾಯಿತು. ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.