ರಾಜ್ಯ

ರಾಹುಲ್‌ ಗಾಂಧಿಗೆ ಕಪಾಳಮೋಕ್ಷ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ FIR ದಾಖಲು

ಸಂಸತ್ತಿನಲ್ಲಿ ಹಿಂದೂಗಳ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆ ಖಂಡಿಸಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ರಾಹುಲ್‌ ಗಾಂಧಿಗೆ ಕಪಾಳಮೋಕ್ಷ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ FIR ದಾಖಲು
ಭರತ್ ಶೆಟ್ಟಿ
Published On :

ಮಂಗಳೂರು: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕಪಾಳಮೋಕ್ಷ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ವಿರುದ್ಧ ಕಾವೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಭರತ್ ಶೆಟ್ಟಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 353 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಸಂಸತ್ತಿನಲ್ಲಿ ಹಿಂದೂಗಳ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆ ಖಂಡಿಸಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ರಾಹುಲ್ ಗಾಂಧಿ ಅವರನ್ನು ಸಂಸತ್ತಿನ ಒಳಗೆ ಲಾಕ್ ಮಾಡಿ ಕಪಾಳಮೋಕ್ಷ ಮಾಡಬೇಕು. ಅಗತ್ಯ ಬಿದ್ದರೆ ಹಿಂದೂಗಳು ಆಯುಧಗಳನ್ನು ಹಿಡಿಯಲು ಸಿದ್ಧರಿದ್ದಾರೆ ಎಂದು ಭರತ್ ಶೆಟ್ಟಿ ಅವರು ಹೇಳಿದ್ದರು.

ಇನ್ನು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕರ ಹೇಳಿಕೆಯನ್ನು ಖಂಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಭರತ್ ಶೆಟ್ಟಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

“ರಾಹುಲ್ ಗಾಂಧಿ ಬಗ್ಗೆ ಶೆಟ್ಟಿ ಮಾತನಾಡಿರುವ ರೀತಿ ಕರಾವಳಿ ಕರ್ನಾಟಕದ ಎಲ್ಲಾ ಶಾಸಕರು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ. ಅವರು ಕೇವಲ ಹಿಂಸಾಚಾರವನ್ನು ಬೆಂಬಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.