ರಾಜ್ಯ

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಇದೇ ಮೊದಲ ಬಾರಿಗೆ ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ
ಆಯೇಷಾ ಖಾನಂ
Published On :

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ.

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರಿಗೆ ಮಾಧ್ಯಮಗಳಲ್ಲಿ 20 ವರ್ಷಕ್ಕಿಂತ ಹೆಚ್ಚು ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ದಿ ಏಷಿಯನ್​ ಏಜ್​, ಸ್ಟಾರ್​ ನ್ಯೂಸ್​, ಆಜ್​ ತಕ್​, ದೂರದರ್ಶನದಲ್ಲಿ ಹೀಗೆ ವಿವಿಧ ಮಾಧ್ಯಮಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ದೂರದರ್ಶನ ಹಾಗೂ ಚಂದನದಲ್ಲಿ 11 ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ.

ಆದೇಶದ ಪ್ರತಿ
ಆದೇಶದ ಪ್ರತಿ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿದ್ದರು. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿದ್ದರು. ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದ ಮತ್ತು ಮಹಿಳೆಯ ಆಯ್ಕೆ ಇದೇ ಮೊದಲು.

ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎಂದು ಕೆ.ವಿ.ಪ್ರಭಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದರು.ಈ ಅಭಿಪ್ರಾಯಕ್ಕೆ ಮನ್ನಣೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಆಯೇಷಾ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಿ, ಆದೇಶ ಹೊರಡಿಸಲು ಸೂಚಿಸಿದ್ದರು.

ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.