ರಾಜ್ಯ

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣ ವಸ್ತಾರೆ ನಿಧನ!

ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು.

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣ ವಸ್ತಾರೆ ನಿಧನ!
ನಿರೂಪಕಿ ಅಪರ್ಣ — online desk
Published On :

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾದರು.

ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, 3 ದಿನಗಳಿಂದ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬನಶಂಕರಿಯ ಸ್ವಗೃಹಕ್ಕೆ ಪಾರ್ಥಿವ ಶರೀರ ತರಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು.

ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, 2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು.

90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಅಪರ್ಣ ಕಾರ್ಯ ನಿರ್ವಹಿಸಿದ್ದರು.

ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರ ರಂಗದ ಅನೇಕ ನಟ/ನಟಿಯರು ಅಪರ್ಣಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.