ಶಿವಮೊಗ್ಗದಲ್ಲಿ ಹವಾಮಾನ ವೈಪರೀತ್ಯ: ಪರಮೇಶ್ವರ್ ಇದ್ದ ವಿಮಾನ ಬೆಂಗಳೂರಿಗೆ ವಾಪಸ್!
ಹವಾಮಾನ ವೈಪರೀತ್ಯ ಹಿನ್ನೆಲೆ ಶಿವಮೊಗ್ಗದಲ್ಲಿ ಲ್ಯಾಂಡ್ ಮಾಡಲು ಆಗದೇ ವಾಪಸ್ ಬೆಂಗಳೂರಿಗೆ ಹಿಂತಿರುಗಿದೆ.

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಪ್ರಯಾಣಿಸುತ್ತಿದ್ದ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್ಸಾದ ಘಟನೆ ನಡೆದಿದೆ,
ಸೊರಬ, ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆಗೆ ಗೃಹ ಸಚಿವ ಪರಮೇಶ್ವರ್ ಅವರು ಇಂಡಿಗೋ ವಿಮಾನದಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಆದರೆ, ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗದೆ ಬೆಂಗಳೂರಿಗೆ ವಾಪಸ್ಸಾಗಿದೆ.
ಹವಾಮಾನ ವೈಪರೀತ್ಯ ಹಿನ್ನೆಲೆ ಶಿವಮೊಗ್ಗದಲ್ಲಿ ಲ್ಯಾಂಡ್ ಮಾಡಲು ಆಗದೇ ವಾಪಸ್ ಬೆಂಗಳೂರಿಗೆ ಹಿಂತಿರುಗಿದೆ ಎಂದು ತಿಳಿದುಬಂದಿದೆ.
ಪರಮೇಶ್ವರ್ ಜಿಲ್ಲೆಯ ಸೊರಬ ಮತ್ತು ತೀರ್ಥಹಳ್ಳಿ ತಾಲೂಕುಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದರು. ಸೊರಬದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 3.45 ರಿಂದ 4.15ರವರೆಗೆ ತೀರ್ಥಹಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ಠಾಣಾ ಕಟ್ಟಡ, ಪೊಲೀಸ್ ವಸತಿಗೃಹಗಳ ಸಮುಚ್ಛಯ ಮತ್ತು ನೂತನ ಅಗ್ನಿಶಾಮಕ ಠಾಣಾ ಕಟ್ಟಡದ ಉದ್ಘಾಟನಾ ಸಮಾರಂಭಗಳಲ್ಲಿ ಭಾಗವಹಿಸಲಿದ್ದರು. ಆದರೆ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿಲ್ಲ. ಈ ಹಿನ್ನೆಲೆ ಗೃಹ ಸಚಿವರು ಮತ್ತೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ವಿಮಾನ ಲ್ಯಾಂಡ್ ಆಗದ ಕಾರಣ ಸಚಿವರ ಜಿಲ್ಲಾ ಪ್ರವಾಸ ರದ್ದಾಗಿದೆ. ಜಿ ಪರಮೇಶ್ವರ ಅವರು ಶನಿವಾರ ಶಿವಮೊಗ್ಗ ಜಿಲ್ಲೆಯಲ್ಲಿ ತಂಗಿದ್ದು, ಭಾನುವಾರ ಬೆಂಗಳೂರಿಗೆ ಮರಳಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದಿಂದ ಸಾಧ್ಯವಾಗಲಿಲ್ಲ. ವಿಮಾನವು ಸುಮಾರು 10 ನಿಮಿಷಗಳ ಕಾಲ ಪ್ರಯಾಣಿಸಿ ಬೆಂಗಳೂರಿಗೆ ಮರಳಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



