ರಾಜ್ಯ

ತಮಿಳುನಾಡಿಗೆ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಜಲ ಸಂಪನ್ಮೂಲ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್, ಅಶೋಕ್, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ತಮಿಳುನಾಡಿಗೆ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ವಪಕ್ಷ ಸಭೆ
Published On :

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು.

ಜಲ ಸಂಪನ್ಮೂಲ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್, ಅಶೋಕ್, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಕಾವೇರಿ ನದಿ ತೀರದ ಜಲಾಶಯಗಳಲ್ಲಿ ಶೇ. 63 ರಷ್ಟು ಮಾತ್ರ ನೀರು ಭರ್ತಿಯಾಗಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಶುಕ್ರವಾರ 20 ಸಾವಿರ, ಶನಿವಾರ 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಜಲಾಶಯದಲ್ಲಿ ಶೇಖರಿಸಿಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸುರಕ್ಷತೆಗಾಗಿ ಸ್ವಲ್ಪ ನೀರನ್ನು ಬಿಡಲಾಗಿದೆ ಎಂದರು.

ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಸಲ್ಲಿಸೋಣ. ಹೀಗಾಗಿ ನಾವು ಮೊಂಡಾಟ ಮಾಡುತ್ತಿದ್ದೇವೆ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.