ರಾಜ್ಯ

ಬರ್ತ್ ಡೇ ಆಚರಣೆಗೆ ಹೊರಟ ಯುವಕರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯಲ್ಲಿ ಹಿಟ್​ & ರನ್​​ಗೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಕೆಂಪಾಪುರದ ಸಿದ್ಧಾರ್ಥ್​(17ವ), ಹರ್ಷ(18ವ) ಮೃತರು.

ಬರ್ತ್ ಡೇ ಆಚರಣೆಗೆ ಹೊರಟ ಯುವಕರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು
ಕಾರು ಅಪಘಾತ
Published On :

ದೇವನಹಳ್ಳಿ: ವಾರಾಂತ್ಯ ಬರ್ತ್ ಡೇ ಪಾರ್ಟಿ ಮಾಡಲು ಹೊರಟಿದ್ದ ಇಬ್ಬರು ಯುವಕರು ಅಪರಿಚಿತ ವಾಹನ ಡಿಕ್ಕಿ ಹೊಡೆದು ಬಲಿಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯಲ್ಲಿ ಹಿಟ್​ & ರನ್​​ಗೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಕೆಂಪಾಪುರದ ಸಿದ್ಧಾರ್ಥ್​(17ವ), ಹರ್ಷ(18ವ) ಮೃತರು.

ಆಗಿದ್ದೇನು?: ಬರ್ತ್​ಡೇ ಆಚರಣೆ ಮಾಡಲು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್​ಡ್ರೈವ್ ಬಂದಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಹಿಟ್ ಅಂಡ್ ರನ್ ಮಾಡಿ ಹೋದ ವಾಹನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋಗೆ ಟ್ಯಾಂಕರ್ ಡಿಕ್ಕಿ, 8 ಜನ ಗಂಭೀರ ಗಾಯ: ಟ್ಯಾಂಕರ್​ ಡಿಕ್ಕಿಯಾಗಿ ಆಟೋದಲ್ಲಿದ್ದ 8 ಜನ ಗಂಭೀರ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಹೊರವಲಯದಲ್ಲಿ ದುರಂತ ನಡೆದಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಆಟೋಗೆ ಡಿಕ್ಕಿ ಹೊಡೆದಿರುವ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಹುಬ್ಬಳ್ಳಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.