ರೇಸಿಂಗ್ ಬೈಕ್ ಕೊಡಿಸಲಿಲ್ಲ ಎಂದು ಪುತ್ರ ಆತ್ಮಹತ್ಯೆ: ನೊಂದು ರೈಲಿಗೆ ತಲೆ ಕೊಟ್ಟ ತಾಯಿ
ಧನರಾಜ ಸುರೇಶ ನಾಯಕ (18) ಹಾಗೂ ಈತನ ತಾಯಿ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆ ಮಾಡಿಕೊಂಡವರು.

ಹುಬ್ಬಳ್ಳಿ: ರೇಸಿಂಗ್ ಬೈಕ್ ಕೊಡಿಸಲಿಲ್ಲ ಎಂದು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದು, ಇದನ್ನು ಕಂಡ ತಾಯಿ ಕೂಡ ರೈಲು ಹಳಿಗೆ ಬಿದ್ದು ಆತ್ಮಹತ್ಯೆಗೆ ಮಾಡಿಕೊಂಡ ದುರ್ಘಟನೆ ಘಟನೆ ರಾಣೆಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ.
ಧನರಾಜ ಸುರೇಶ ನಾಯಕ (18) ಹಾಗೂ ಈತನ ತಾಯಿ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆ ಮಾಡಿಕೊಂಡವರು.
ಎರಡು ವರ್ಷದ ಹಿಂದೆ ಸುರೇಶ ಅವರ 14 ವರ್ಷದ ಇನ್ನೋರ್ವ ಪುತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಪತ್ನಿ, ಪುತ್ರನನ್ನು ಕಳೆದುಕೊಂಡು ದುಖಃದ ಮಡುವಿನಲ್ಲಿ ಮುಳುಗುವಂತಾಗಿದೆ.
ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಧನರಾಜ ತನಗೆ ರೇಸಿಂಗ್ ಬೈಕ್ ತೆಗೆದುಕೊಳ್ಳಲು ಹಣ ಬೇಕೆಂದು ತಂದೆ- ತಾಯಿ ಬಳಿ ಬೆಳಗ್ಗೆ ಜಗಳ ತೆಗೆದಿದ್ದ. ಕೂಲಿ ಮಾಡಿಕೊಂಡಿರುವ ತಂದೆ ಸುರೇಶ ಆಯ್ತು ಹೇಗಾದರೂ ಮಾಡಿ ಕೊಡಿಸುತ್ತೇನೆ ಎಂದು ಕೆಲಸಕ್ಕೆ ಹೋಗಿದ್ದರು. ನಂತರ ತಾಯಿ ಮಗನಿಗೆ ಬುದ್ದಿಮಾತು ಹೇಳಿದ್ದರು.
ತಾಯಿ ಪಕ್ಕದ ಮನೆಗೆ ಹೋಗಿದ್ದ ವೇಳೆ ಮಧ್ಯಾಹ್ನ ಧನರಾಜ ಅಡುಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತಿ ಮನೆಗೆ ಮರಳಿದ ನಂತರ ಘಟನೆ ಬೆಳಕಿಗೆ ಬಂದಿದೆ.
ತಾಯಿ ಮನೆಗೆ ಬರುತ್ತಿದ್ದಂತೆ ಮಗನ ಸ್ಥಿತಿ ಕಂಡು ದಿಗ್ಬ್ರಾಂತರಾಗಿದ್ದಾರೆ. ಇದರಿಂದ ದುಃಖಿತರಾಗಿ ಕರೂರ ರೈಲು ನಿಲ್ದಾಣದ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕುಮಾರಪಟ್ಟಣ ಪಿಎಸ್‌ಐ ಪ್ರವೀಣ ವಾಲೀಕಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



