ಒಂದೇ ಹುದ್ದೆ-ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯದಲ್ಲಿರುವ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ
ಐದು ವರ್ಷಗಳಿಂದ ಒಂದೇ ಸ್ಥಳದಲ್ಲಿ ಮತ್ತು ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಸಾರ್ವಜನಿಕ ದೂರುಗಳನ್ನು ಹೊಂದಿರುವ ಅಧಿಕಾರಿಗಳ ಪಟ್ಟಿಯನ್ನು ಸಲ್ಲಿಸಲು ಎಲ್ಲಾ ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಬೆಂಗಳೂರು: ಕಳೆದ ಐದು ವರ್ಷಗಳಿಂದ ಒಂದೇ ಸ್ಥಳದಲ್ಲಿ ಮತ್ತು ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ.
ಅಂತಹ ಅಧಿಕಾರಿಗಳು ಮತ್ತು ಸಿಬ್ಬಂದಿ ಪಟ್ಟಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸುತ್ತೋಲೆ ಹೊರಡಿಸಿದೆ.
ಐದು ವರ್ಷಗಳಿಂದ ಒಂದೇ ಸ್ಥಳದಲ್ಲಿ ಮತ್ತು ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಸಾರ್ವಜನಿಕ ದೂರುಗಳನ್ನು ಹೊಂದಿರುವ ಅಧಿಕಾರಿಗಳ ಪಟ್ಟಿಯನ್ನು ಸಲ್ಲಿಸಲು ಎಲ್ಲಾ ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.
ಒಂದೇ ಸ್ಥಳದಲ್ಲಿ ದೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿರುವ ಕೆಲ ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿವೆ ಎಂದು ತಿಳಿಸಿದರು.
ಈ ಸೂಚನೆಯಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕಚೇರಿಯಲ್ಲಿ ಸಿಬ್ಬಂದಿಯ ಕಾರ್ಯಕ್ಷಮತೆ ಹೆಚ್ಚಿಸಲು ಮತ್ತು ಶಿಸ್ತು ಪಾಲನೆ ಅನುಷ್ಠಾನಕ್ಕೆ ತರಲು ಶಿಸ್ತುಕ್ರಮ ತೆಗೆದುಕೊಳ್ಳಿ ಎಂದೂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಹಲವು ನೌಕರರು ಮತ್ತು ಅಧಿಕಾರಿಗಳು ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದು, ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ಅಂತಹ ಅಧಿಕಾರಿಗಳ ವಿರುದ್ಧವೂ ದೂರುಗಳು ಬಂದಿವೆ. ಐದು ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಅಂತಹ ಅಧಿಕಾರಿಗಳ ಪಟ್ಟಿಯನ್ನು ಡಿಸಿಗಳು ಸಿದ್ಧಪಡಿಸಬೇಕು ಮತ್ತು ಅಂತಹ ಅಧಿಕಾರಿಗಳ ವಿರುದ್ಧ ಯಾವುದೇ ದೂರುಗಳಿದ್ದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಹೇಳಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



