ನೌಕರರ ವೇತನ ಶೇ. 27.5ರಷ್ಟು ಹೆಚ್ಚಳ: ಜುಲೈ 1 ರಿಂದ ಅನ್ವಯವಾಗುವಂತೆ 7ನೇ ವೇತನ ಆಯೋಗ ಜಾರಿ
ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ 7ನೇ ವೇತನ ಆಯೋಗದ ಶಿಫಾರಸು ಆಗಸ್ಟ್ 1ರಂದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದ್ದಾರೆ.

ಬೆಂಗಳೂರು: ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ 7ನೇ ವೇತನ ಆಯೋಗದ ಶಿಫಾರಸು ಆಗಸ್ಟ್ 1ರಂದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದ್ದಾರೆ.
ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್‌ಮೆಂಟ್ ಸೇರಿಸುವ ಮೂಲಕ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ 58.50 ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗಲಿದೆ.
ನೌಕರರ ಕನಿಷ್ಟ ಮೂಲವೇತನವು 17 ಸಾವಿರ ರೂಪಾಯಿಯಿಂದ 27 ಸಾವಿರ ರೂಪಾಯಿಗೆ ಹಾಗೂ ಗರಿಷ್ಟ ವೇತನವು 1,50,600 ರೂಪಾಯಿಯಿಂದ 2,41,200 ರೂಪಾಯಿಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8.500 ರೂಪಾಯಿಯಿಂದ 13,500 ರೂಪಾಯಿಗೆ ಮತ್ತು ಗರಿಷ್ಠ ಪಿಂಚಣಿಯು 75,300 ರೂಪಾಯಿಯಿಂದ 1,20,600 ರೂಪಾಯಿಗೆ ಪರಿಷ್ಕರಣೆಗೊಳ್ಳುತ್ತದೆ. ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ.
ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



