2035 ರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು: ಎಂ ಬಿ ಪಾಟೀಲ್
'ಹೊಸ ವಿಮಾನ ನಿಲ್ದಾಣವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ರಿಂದ 60 ಕಿ.ಮೀ ದೂರದಲ್ಲಿರಬೇಕು. ತುಮಕೂರು ಮತ್ತು ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣ ಯೋಜನೆಯ ಉದ್ದೇಶ ಹೊಂದಿಲ್ಲ ಆದರೆ, ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯೋಚಿಸುತ್ತಿದ್ದೇವೆ'

ಬೆಂಗಳೂರು: 2035 ರೊಳಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯ ವಿಷಯದಲ್ಲಿ ತನ್ನ ಸಾಮರ್ಥ್ಯದ ಪೀಕ್ ಗೆ ಹೋಗಲಿದೆ. ಅಷ್ಟರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಬೇಕು ಎಂದು ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ್ ಮಂಗಳವಾರ ವಿಧಾನಪರಿಷತ್ ನಲ್ಲಿ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಅವರು,ಹೊಸ ವಿಮಾನ ನಿಲ್ದಾಣವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ರಿಂದ 60 ಕಿ.ಮೀ ದೂರದಲ್ಲಿರಬೇಕು. ತುಮಕೂರು ಮತ್ತು ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣ ಯೋಜನೆಯ ಉದ್ದೇಶ ಹೊಂದಿಲ್ಲ ಆದರೆ, ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯೋಚಿಸುತ್ತಿದ್ದೇವೆ ಎಂದರು.
2035 ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾಮರ್ಥ್ಯ 110 ಮಿಲಿಯನ್ ಪ್ರಯಾಣಿಕರು ಮತ್ತು 1.10 ಮಿಲಿಯನ್ ಟನ್ ಸರಕು ಸಾಗಣೆಯ ಫೀಕ್ ಗೆ ತಲುಪಲಿದೆ. ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು, ಹೀಗಾಗಿ ರಾಜ್ಯ ಸರ್ಕಾರದ ಮುಂಚಿತವಾಗಿ ಯೋಜನೆ ರೂಪಿಸುತ್ತಿದೆ. 2033ರವರೆಗೂ ಮತ್ತೊಂದುವಿಮಾನ ನಿಲ್ದಾಣ ಬೇಡ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಹೇಳಿರುವುದಾಗಿ ಅವರು ತಿಳಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 125 ಕಿ.ಮೀ ವ್ಯಾಪ್ತಿಯಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾವು ಈಗ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿದರೆ, ಅದನ್ನು ಪೂರ್ಣಗೊಳಿಸಲು ಇನ್ನೂ ಏಳೆಂಟು ವರ್ಷಗಳು ಬೇಕಾಗುತ್ತದೆ. ಈ ಸಂಬಂಧ ಈಗಾಗಲೇ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸಿದ್ದೇನೆ ಎಂದು ಪಾಟೀಲ್ ತಿಳಿಸಿದರು.
2ನೇ ವಿಮಾನ ನಿಲ್ದಾಣವನ್ನು ದಾಬಸ್ ಪೇಟೆ ಅಥವಾ ತುಮಕೂರು ಬಳಿ ಸ್ಥಾಪಿಸಬೇಕೇ ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಮತ್ತಿತರ ಕಡೆಯ ಜನರು ವಿಮಾನ ನಿಲ್ದಾಣವನ್ನು ಬಯಸುತ್ತಿದ್ದಾರೆ. ಆದರೆ, ದೀರ್ಘಾವಧಿಯಲ್ಲಿ ನಮಗೆ ಸಹಾಯ ಮಾಡುವ ಸ್ಥಳದಲ್ಲಿ ವಿಮಾನ ನಿಲ್ದಾಣವಿರಲು ನಾವು ಬಯಸುತ್ತೇವೆ. ದೂರದಲ್ಲಿದ್ದರೆ ನಮಗೆ ತೊಂದರೆಯಾಗುತ್ತದೆ. ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರ್ಕಾರಕ್ಕೆ ಕನಿಷ್ಠ 4,500 ಎಕರೆಯಿಂದ 5,000 ಎಕರೆ ಭೂಮಿ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



