ರಾಜ್ಯ

ಉಡುಪಿ ಅಗ್ನಿ ದುರಂತ: ರಮಾನಂದ್ ಶೆಟ್ಟಿ ಸಾವು ಬೆನ್ನಲ್ಲೇ ಪತ್ನಿಯೂ ನಿಧನ

ರಮಾನಂದ್ ಶೆಟ್ಟಿ ಅವರ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು. ಅಗ್ನಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.

ಉಡುಪಿ ಅಗ್ನಿ ದುರಂತ: ರಮಾನಂದ್ ಶೆಟ್ಟಿ ಸಾವು ಬೆನ್ನಲ್ಲೇ ಪತ್ನಿಯೂ ನಿಧನ
ರಮಾನಂದ್ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿ.
Published On :

ಉಡುಪಿ: ಉಡುಪಿಯ ಬಾರ್ ಮಾಲೀಕರೊಬ್ಬರ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಸಾವು ಬೆನ್ನಲ್ಲೇ ಅವರ ಪತ್ನಿ ಕೂಡ ಸಾವನ್ನಪ್ಪಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ರಮಾನಂದ್ ಶೆಟ್ಟಿ ಅವರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಹಿರಿಯ ಮಗನೊಂದಿಗೆ ರೀಲ್ಸ್ ಮಾಡಿ ಅಶ್ವಿನಿ ಖ್ಯಾತಿ ಪಡೆದಿದ್ದರು.

ಬೆಂಕಿ ಕೆನ್ನಾಲಿಗೆಗೆ ಗಂಭಿರವಾಗಿ ಗಾಯಗೊಂಡಿದ್ದ ಅಶ್ವಿನಿ ಉಸಿರಾಟ ಹಾಗೂ ಶಾಸ್ವಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಘಟನೆಯಲ್ಲಿ ಇವರ ಇಬ್ಬರು ಮಕ್ಕಳು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ.

ಮೊನ್ನೆ ತಡರಾತ್ರಿ ರಮಾನಂದ್ ಶೆಟ್ಟಿ ಅವರ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು. ಅಗ್ನಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಇನ್ನು ಬೆಂಕಿಯಿಂದ ಮನೆಯೆಲ್ಲ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಒಳಗಿದ್ದ ವಸ್ತುಗಳೆಲ್ಲ ನಾಶವಾಗಿವೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.