ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು.

ಕಲಬುರಗಿ: ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಕಲಬುರಗಿ ನಗರದ ಭಾರತ ಪ್ರೈಡ್ ಅಪಾರ್ಟ್‌ಮೆಂಟ್‌ನಲ್ಲಿನ ಮನೆಯಿಂದ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ರಾಥೋಡ್ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಸರ್ಧೆಗಿಳಿಸಿದ್ದು, ಚುನಾವಣೆಯಲ್ಲಿ ಸೋಲು ಕಂಡಿದ್ದರು.
ಅನ್ನ ಭಾಗ್ಯ ಯೋಜನೆಯು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಆಹಾರ ಧಾನ್ಯಗಳನ್ನು ನೀಡುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



