ಖಾಸಗಿ ಉದ್ಯಮ್ಯಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ: ಸಿಎಂ ಸಿದ್ದರಾಮಯ್ಯ
ಖಾಸಗಿ ಉದ್ಯಮಗಳಲ್ಲಿ "ಸಿ ಮತ್ತು ಡಿ" ದರ್ಜೆಯ ಹುದ್ದೆಗಳಿಗೆ ಶೇಕಡಾ 100 ರಷ್ಟು ಕನ್ನಡಿಗರ ನೇಮಕ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಖಾಸಗಿ ಉದ್ಯಮಗಳಲ್ಲಿ ಸಿ ಮತ್ತು ಡಿ ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ ಸೇರಿದಂತೆ ಏಳು ಮಸೂದೆಗಳನ್ನು ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕನ್ನಡಿಗರ ಹಿತ ಕಾಪಾಡುವುದು ರಾಜ್ಯ ಸರ್ಕಾರದ ಆದ್ಯತೆಯಾಗಿದೆ. ರಾಜ್ಯದ ಎಲ್ಲಾ ಖಾಸಗಿ ಉದ್ಯಮಗಳಲ್ಲಿ "ಸಿ ಮತ್ತು ಡಿ" ದರ್ಜೆಯ ಹುದ್ದೆಗಳಿಗೆ ಶೇಕಡಾ 100 ರಷ್ಟು ಕನ್ನಡಿಗರ ನೇಮಕ ಕಡ್ಡಾಯಗೊಳಿಸುವ ಮಸೂದೆಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಕನ್ನಡಿಗರು ಉದ್ಯೋಗದಿಂದ ವಂಚಿತರಾಗುವುದನ್ನು ತಪ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ. ಕನ್ನಡ ನಾಡು, ಮಾತೃಭೂಮಿಯಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು, ಕನ್ನಡಿಗರ ಹಿತ ಕಾಪಾಡುವುದೇ ನಮ್ಮ ಆದ್ಯತೆ’ ಎಂದು ಬರೆದುಕೊಂಡಿದ್ದಾರೆ.
ರಾಜ್ಯದಿಂದ ನೆಲ, ಜಲ ಸೇರಿದಂತೆ ಮೂಲಸೌಕರ್ಯ ಪಡೆಯುವ ಕೈಗಾರಿಕೆಗಳು ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಮಸೂದೆಯಲ್ಲಿ ಹೇಳಲಾಗಿದ್ದು, ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಿದ್ದರು. ಆದರೆ, ಇದಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೆಲ ಕೈಗಾರಿಕೋದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಗಂಭೀರವಾದ ತಕ್ಷಣ ಸಿದ್ದರಾಮಯ್ಯ ತಮ್ಮ ಟ್ವೀಟ್ ನ್ನು ಡಿಲೀಟ್ ಮಾಡಿದ್ದರು. ಇದೀಗ ಮತ್ತೆ ಟ್ವೀಟ್ ಮಾಡಿದ್ದಾರೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸಲು ಉದ್ಯಮಿಗಳ ಜೊತೆ ಚರ್ಚಿಸುತ್ತೇವೆ: ಮಹೇಶ್ ಜೋಶಿ (ಸಂದರ್ಶನ)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


