20 ವರ್ಷಗಳ ಹಿಂದಿನ ಕೊಲೆ ಪ್ರಕರಣ: ಕನ್ನಡ ಸಿನಿಮಾ ನಿರ್ದೇಶಕ ಬಂಧನ!
ರೌಡಿ ಶೀಟರ್ ಕೋಥಾ ರವಿ ಹತ್ಯೆ ಪ್ರಕರಣದಲ್ಲಿ ನಿರ್ದೇಶಕ 8ನೇ ಆರೋಪಿಯಾಗಿದ್ದಾರೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2004ರಲ್ಲಿ ಕೊಲೆ ನಡೆದಿತ್ತು.

ಬೆಂಗಳೂರು: 20 ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಕನ್ನಡ ಚಲನಚಿತ್ರ ನಿರ್ದೇಶಕರೊಬ್ಬರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್ ಕೋಥಾ ರವಿ ಹತ್ಯೆ ಪ್ರಕರಣದಲ್ಲಿ ನಿರ್ದೇಶಕ 8ನೇ ಆರೋಪಿಯಾಗಿದ್ದಾರೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2004ರಲ್ಲಿ ಕೊಲೆ ನಡೆದಿತ್ತು.
ನಿರ್ದೇಶಕನನ್ನು ಗಜೇಂದ್ರ ಅಲಿಯಾಸ್ ಗಜ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಹತ್ಯೆ ನಂತರ ಪೊಲೀಸರು ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸುಮಾರು ಒಂದು ವರ್ಷ ನ್ಯಾಯಾಂಗ ಬಂಧನದಲ್ಲಿದ್ದು, ನಂತರ ಜಾಮೀನಿನ ಮೇರೆಗೆ ಜೈಲಿನಿಂದ ಹೊರಗೆ ಬಂದಿದ್ದರು. ತದನಂತರ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಚಂದ್ರಪ್ಪ ಮತ್ತು ಅಲ್ಯೂಮಿನಿಯಂ ಬಾಬು ಕೊಲೆಯಲ್ಲಿ ಭಾಗಿಯಾಗಿರುವ ಇನ್ನಿಬ್ಬರು.
ಅರಸಯ್ಯನ ಆಪ್ತನಾಗಿರುವ ಗಜೇಂದ್ರ ಎರಡು ಕನ್ನಡ ಮತ್ತು ತಮಿಳು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ ಎನ್ನಲಾಗಿದೆ. ಜಾಮೀನು ಸಿಕ್ಕ ನಂತರ ಅವರು ನೆರೆಯ ರಾಜ್ಯದಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



