ರಾಜ್ಯ

ವಾಲ್ಮೀಕಿ ನಿಗಮ ಅಕ್ರಮ; CM-DCM ಭೇಟಿಯಾದ ಶಾಸಕ ಬಸನಗೌಡ ದದ್ದಲ್, ಮಹತ್ವದ ಚರ್ಚೆ

ಅಧಿವೇಶನ ನಡೆಯುವಾಗ ಬಂಧನಕ್ಕೆ ಸ್ಪೀಕರ್‌ ಅನುಮತಿ ನೀಡದೇ ಇದ್ದರೆ ಬಂಧನ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇಡಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ.

ವಾಲ್ಮೀಕಿ ನಿಗಮ ಅಕ್ರಮ; CM-DCM ಭೇಟಿಯಾದ ಶಾಸಕ ಬಸನಗೌಡ ದದ್ದಲ್, ಮಹತ್ವದ ಚರ್ಚೆ
ಬಸನಗೌಡ ದದ್ದಲ್‌
Published On :

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದ ಆರೋಪದಲ್ಲಿ ಇ.ಡಿ ಬಂಧನದ ಆತಂಕದಲ್ಲಿರುವ ರಾಯಚೂರು ಗ್ರಾಮೀಣ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರು, ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಮತ್ತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

187 ಕೋಟಿ ರೂ.ಗಳ ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತಮ್ಮನ್ನು ಹುಡುಕುತ್ತಿರುವ ಬೆಳವಣಿಗೆಗಳ ಬಗ್ಗೆ ದದ್ದಲ್, ಸಿಎಂ, ಡಿಸಿಎಂ, ಸ್ಪೀಕರ್ ಹಾಗೂ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಈಗಾಗಲೇ ದದ್ದಲ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಇಷ್ಟು ದಿನ ನಾಪತ್ತೆಯಾಗಿದ್ದ ದದ್ದಲ್ ಅವರು, ಸೋಮವಾರದಿಂದ ಆರಂಭವಾದ ಅಧಿವೇಶನದಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದಾರೆ.

ಕಲಾಪ ನಡೆಯುವಾಗ ಶಾಸಕರನ್ನು ಬಂಧಿಸಬೇಕಾದರೆ ಸ್ಪೀಕರ್‌ ಅನುಮತಿ ಕಡ್ಡಾಯ. ಅಧಿವೇಶನ ನಡೆಯುವಾಗ ಬಂಧನಕ್ಕೆ ಸ್ಪೀಕರ್‌ ಅನುಮತಿ ನೀಡದೇ ಇದ್ದರೆ ಬಂಧನ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇಡಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.