ವಾಲ್ಮೀಕಿ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಮತ್ತೆ ಐದು ದಿನ ವಿಸ್ತರಣೆ
ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಲಾಯಿತು.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರ ಇಡಿ ಕಸ್ಟಡಿಯನ್ನು ವಿಶೇಷ ನ್ಯಾಯಾಲಯ ಗುರುವಾರ ಐದು ದಿನಗಳ ಕಾಲ ವಿಸ್ತರಿಸಿದೆ.
ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಲಾಯಿತು.
ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮತ್ತೆ ತಮ್ಮ ಕಸ್ಟಿಡಿಗೆ ನೀಡುವಂತೆ ಇಡಿ ಪರ ವಕೀಲ ಪ್ರಸನ್ನ ಕುಮಾರ್ ಅವರು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್ ನಾಗೇಂದ್ರ ಅವರನ್ನು ಜುಲೈ 22ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಒಟ್ಟು 89.65 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯದಿಂದ ವಿಸ್ತೃತ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ವಾಲ್ಮೀಕಿ ಹಗರಣ ಸಂಬಂಧ ನಾಲ್ಕು ರಾಜ್ಯಗಳ 23 ಕಡೆ ದಾಳಿ ನಡೆಸಿದ್ದೇವೆ. 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದ್ದು, ನಂತರ ಹಲವು ನಕಲಿ ಅಕೌಂಟ್‌ಗಳಿಗೆ ಹೋಗಿ ಕ್ಯಾಶ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಬಸನಗೌಡ ದದ್ದಲ್ (ವಾಲ್ಮೀಕಿ ನಿಗಮದ ಅಧ್ಯಕ್ಷ) ಮನೆಯಲ್ಲಿ ದಾಖಲೆಗಳು ಪತ್ತೆಯಾಗಿವೆ ಎಂದು ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



