ರಾಜ್ಯ

ನೈಸ್‌ ರಸ್ತೆಯಲ್ಲಿ ಅಪಘಾತ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ವಾಹನ; 16 ಮೇಕೆ ಸಾವು

ನೈಸ್‌ ರಸ್ತೆ ಗ್ರಾಯತ್ರಿ ಕ್ರಷರ್‌ ಬಳಿ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದ ಪರಿಣಾಮ ವಾಹನದಲ್ಲಿದ್ದ 16 ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ನೈಸ್‌ ರಸ್ತೆಯಲ್ಲಿ ಅಪಘಾತ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ವಾಹನ; 16 ಮೇಕೆ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನೈಸ್ ರಸ್ತೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ 16 ಮೇಕೆಗಳು ಸಾವನ್ನಪ್ಪಿವೆ.

ನೈಸ್‌ ರಸ್ತೆ ಗ್ರಾಯತ್ರಿ ಕ್ರಷರ್‌ ಬಳಿ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದ ಪರಿಣಾಮ ವಾಹನದಲ್ಲಿದ್ದ 16 ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ಶಿವಾನಂದ ಎಂಬುವವರು ವಿಜಯಪುರದಿಂದ ತಮಿಳುನಾಡಿನ ಸೇಲಂಗೆ 40 ಮೇಕೆಗಳನ್ನು ಬೊಲೆರೊ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು. ನೈಸ್‌ ರಸ್ತೆಯ ತಿರುವಿನಲ್ಲಿ ವಾಹನ ಉರುಳಿ ಬಿದ್ದಿದೆ. ಪರಿಣಾಮ 16 ಮೇಕೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ.

22 ಮೇಕೆಗಳು ಬದುಕುಳಿದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ. ನಿಗದಿಗಿಂತ ಹೆಚ್ಚಿನ ಭಾರ ತುಂಬಿದ್ದರಿಂದ ವಾಹನ ಉರುಳಿ ಬಿದ್ದಿದೆ ಎನ್ನಲಾಗಿದೆ. ಈ ಸಂಬಂಧ ಚಾಲಕ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.