ರಾಜ್ಯ

ಪ್ಯಾರೀಸ್ ಒಲಿಂಪಿಕ್ಸ್: ರಾಜ್ಯದ ಒಂಬತ್ತು ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ

''ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ'' ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು.

ಪ್ಯಾರೀಸ್ ಒಲಿಂಪಿಕ್ಸ್: ರಾಜ್ಯದ ಒಂಬತ್ತು ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ
ಸಿಎಂ ಸಿದ್ದರಾಮಯ್ಯ,ಡಾ. ಗೋವಿಂದರಾಜು
Published On :

ಬೆಂಗಳೂರು: ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಇದು ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಲಾಗಿದೆ. ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.