ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್ 4ನೇ ಆರೋಪಿ ರಾಘು ತಾಯಿ ನಿಧನ
ಮಾನಸಿಕ ಅಸ್ವಸ್ಥತೆ, ವಯೋಸಹಜ ಕಾಯಿಲೆಯಿಂದ ರಾಘವೇಂದ್ರನ ತಾಯಿ ಕೋಳಿ ಬುರುಜನಹಟ್ಟಿ ಮನೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ (Darshan) ಗ್ಯಾಂಗ್‌ನ ನಾಲ್ಕನೇ ಆರೋಪಿ ರಾಘವೇಂದ್ರ ಅವರ ತಾಯಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಘವೇಂದ್ರ ಅಲಿಯಾಸ್ ರಘು ತಾಯಿ ಮಂಜುಳಮ್ಮ (75) ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಮಾನಸಿಕ ಅಸ್ವಸ್ಥತೆ, ವಯೋಸಹಜ ಕಾಯಿಲೆಯಿಂದ ರಾಘವೇಂದ್ರನ ತಾಯಿ ಕೋಳಿ ಬುರುಜನಹಟ್ಟಿ ಮನೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಂಜುಳಮ್ಮ ಅವರು ರಾಘವೇಂದ್ರ ಅವರ ಸಹೋದರ ಮುರಳಿ ಎಂಬುವವರ ಮನೆಯಲ್ಲಿದ್ದರು. ಮುರುಳಿ ಮದುವೆಯಾಗದೇ ತಾಯಿ ಆರೈಕೆ ಮಾಡುತಿದ್ದ. ರಘು ಲವ್ ಮ್ಯಾರೇಜ್ ಆಗಿ ಪತ್ನಿ ಜೊತೆ ಪ್ರತ್ಯೇಕವಾಗಿ ವಾಸವಾಗಿದ್ದ. ಆಗಾಗ್ಗೆ ಆಗಮಿಸಿ ತಾಯಿ ಆರೋಗ್ಯ ವಿಚಾರಿಸುತ್ತಿದ್ದ ಎಂದು ತಿಳಿದುಬಂದಿದೆ.
ರಾಘವೇಂದ್ರ ಚಿತ್ರದುರ್ಗ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷನಾಗಿದ್ದ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



