ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ವಿರೋಧ: ಬಯೋಕಾನ್ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದು ಆಕ್ರೋಶ!
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಬಯೋಕಾನ್ ಲೋಗೊಗಳು ಮತ್ತು ಹೆಸರಿನ ಮೇಲೆ ಕಪ್ಪು ಬಣ್ಣ ಬಳಿದಿರುವುದನ್ನು ತೋರಿಸುತ್ತದೆ, ಆದರೆ ಸ್ಥಳದ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ವಿರೋಧಿಸಿದ ನಂತರ ಅಪರಿಚಿತ ವ್ಯಕ್ತಿಗಳು ಬಯೋಕಾನ್ ನಾಮಫಲಕಕ್ಕೆ ಕಪ್ಪು ಬಣ್ಣವನ್ನು ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತರ ಹಲವು ಉದ್ಯಮ ನಾಯಕರು ಮತ್ತು ಐಟಿ ಉದ್ಯಮಿಗಳು ಕೂಡ ಮಸೂದೆಯನ್ನು ವಿರೋಧಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಬಯೋಕಾನ್ ಲೋಗೊಗಳು ಮತ್ತು ಹೆಸರಿನ ಮೇಲೆ ಕಪ್ಪು ಬಣ್ಣ ಬಳಿದಿರುವುದನ್ನು ತೋರಿಸುತ್ತದೆ, ಆದರೆ ಸ್ಥಳದ ಬಗ್ಗೆ ಯಾವುದೇ ಖಚಿತತೆ ಇಲ್ಲ. ಕನ್ನಡ ಪರ ಸಂಘಟನೆಯೊಂದು ಬಣ್ಣ ಬಳಿದಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಈ ಮಧ್ಯೆ ಯಾವುದೇ ದೂರು ದಾಖಲಾಗಿದೆಯೇ ಎಂದು ಪರಿಶೀಲಿಸಲು TNIE ಹೆಬ್ಬಗೋಡಿ ಪೊಲೀಸರನ್ನು ಸಂಪರ್ಕಿಸಿತು. ಆದರೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕೈಗಾರಿಕೆಗಳು ಮತ್ತು ಉದ್ಯಮಿಗಳಿಂದ ಹಿನ್ನಡೆಯನ್ನು ಎದುರಿಸಿದ ನಂತರ, ಕರ್ನಾಟಕ ಸರ್ಕಾರ ಬುಧವಾರ ಮೀಸಲಾತಿ ಮಸೂದೆಯನ್ನು ತಡೆಹಿಡಿಯಿತು. ಮೊನ್ನೆ ಸೋಮವಾರ, ಮಸೂದೆಯನ್ನು ಸಂಪುಟದಲ್ಲಿ ಅಂಗೀಕರಿಸಲಾಗಿತ್ತು. ಖಾಸಗಿ ಕಂಪನಿಗಳಲ್ಲಿನ ಎಲ್ಲಾ ಆಡಳಿತಾತ್ಮಕ ಉದ್ಯೋಗಗಳಲ್ಲಿ ಶೇ.50 ಮತ್ತು ಎಲ್ಲಾ ಆಡಳಿತಾತ್ಮಕವಲ್ಲದ ಉದ್ಯೋಗಗಳಲ್ಲಿ ಶೇ.70 ರಷ್ಟು ಸ್ಥಳೀಯರಿಗೆ ಮೀಸಲಿಡಬೇಕು ಎಂದು ಮಸೂದೆಯಲ್ಲಿ ಹೇಳಲಾಗಿದೆ.
ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ "ಟೆಕ್ ಕೇಂದ್ರವಾಗಿ ನಮಗೆ ನುರಿತ ಪ್ರತಿಭೆಗಳ ಅಗತ್ಯವಿದೆ ಮತ್ತು ಸ್ಥಳೀಯರಿಗೆ ಉದ್ಯೋಗಗಳನ್ನು ಒದಗಿಸುವ ಗುರಿಯೊಂದಿಗೆ ತಂತ್ರಜ್ಞಾನದಲ್ಲಿ ನಮ್ಮ ಪ್ರಮುಖ ಸ್ಥಾನದ ಮೇಲೆ ಪರಿಣಾಮ ಬೀರಬಾರದು ಎಂದು ಹೇಳಿದ್ದರು. ಈ ಮಧ್ಯೆ ಫೋನ್‌ಪೇ ಸಂಸ್ಥಾಪಕರು ಮೀಸಲಾತಿ ಮಸೂದೆಯನ್ನು ಟೀಕಿಸಿದ ನಂತರ ಕರ್ನಾಟಕದಲ್ಲಿ "ಫೋನ್‌ಪೇ ಬಹಿಷ್ಕರಿಸಿ" ಟ್ರೆಂಡಿಂಗ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



