ರಾಜ್ಯ

ಕರಾವಳಿಯಲ್ಲಿ ವರುಣನ ಆರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ ಗುಡ್ಡ ಕುಸಿದು 9 ಜನರ ಪೈಕಿ 7 ಜನರು ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಣ್ಣು ಕುಸಿದ ಪರಿಣಾಮ ಸಂಚಾರ ಬಂದ ಆಗಿದೆ.

ಕರಾವಳಿಯಲ್ಲಿ ವರುಣನ ಆರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ
ಸಿಎಂ ಸಿದ್ದರಾಮಯ್ಯ
Published On :

ಉತ್ತರ ಕನ್ನಡ: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದ್ದಾನೆ. ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ ಗುಡ್ಡ ಕುಸಿದು 9 ಜನರ ಪೈಕಿ 7 ಜನರು ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಣ್ಣು ಕುಸಿದ ಪರಿಣಾಮ ಸಂಚಾರ ಬಂದ ಆಗಿದೆ. ಹೀಗಾಗಿ ಸದ್ಯ ಹಾನಿಯಾದ ಜಿಲ್ಲೆಯ ಸ್ಥಳಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಭೇಟಿ ನೀಡುತ್ತಿದ್ದಾರೆ.

ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿ ನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ.

ಜೊತೆಗೆ ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ. 775 ಕೋಟಿ ಹಣ ನೀಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಶಿರೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಇಂದು ಭೇಟಿ ಮಾಡಿದ್ದಾರೆ. ಘಟನೆ ಬಗ್ಗೆ ಡಿಸಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದು ದುರಂತ. ದುರಂತದಲ್ಲಿ ಮೃತಪಟ್ಟವರ ಕುಟುಂಬದ ಜತೆ ಸರ್ಕಾರ ನಿಲ್ಲಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.