ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು
ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಆದೇಶ ಕಾಯ್ದಿರಿಸಿತ್ತು.

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಆದೇಶ ಕಾಯ್ದಿರಿಸಿತ್ತು. ಇಂದು ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆರೋಪಿ ಸೂರಜ್ ರೇವಣ್ಣ ಯಾವುದೇ ರೀತಿಯಲ್ಲೂ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ತನಿಖಾಧಿಕಾರಿ ಮುಂದೆ ಪ್ರತಿ ತಿಂಗಳ ಎರಡನೇ ಭಾನುವಾರ ಬೆಳಗ್ಗೆ 9.00 ರಿಂದ ಸಂಜೆ 5.00 ರ ನಡುವೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.
ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಅರೋಪದಡಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



