ರಾಜ್ಯ

ಕರಾವಳಿ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ ನೀಡಿ: ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜಾ ಆಗ್ರಹ

ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.

ಕರಾವಳಿ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ ನೀಡಿ: ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜಾ ಆಗ್ರಹ
ಅಂಕೋಲಾ-ಶಿರೂರು ಭೂ ಕುಸಿತ
Published On :

ಬೆಂಗಳೂರು: ಈ ಬಾರಿ ಸುರಿದ ಭಾರಿ ಮಳೆಗೆ ಘಟ್ಟಪ್ರದೇಶ ವಿಶೇಷವಾಗಿ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಸೋಮವಾರ ಆಗ್ರಹಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆ ಈ ಬಗ್ಗೆ ಮಾತನಾಡಿದ ಹರೀಶ್‌ ಪೂಂಜಾ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಿತ್ತು ಎಂದು ತಿಳಿಸಿದರು. ಇನ್ನು ಶಾಸಕ ಹರೀಶ್ ಪೂಂಜಾ ಅವರ ಮಾತಿಗೆ ಸುನಿಲ್‌ ಕುಮಾರ್‌, ವಿಪಕ್ಷ ನಾಯಕ ಆರ್ ಅಶೋಕ್ ದನಿಗೂಡಿಸಿದರು.

ಈ ಪ್ರದೇಶದಲ್ಲಿ ಸರ್ಕಾರ ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳುವ ಮೊದಲು ರಸ್ತೆಗಳನ್ನು ಮೋಟಾರು ಮಾಡುವಂತೆ ಮಾಡುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಮಾಡಿದರು. ಮಳೆಗಾಲದ ನಂತರ ಈ ಬಗ್ಗೆ ಪರಿಶೀಲಿಸುವುದಾಗಿ ಜಾರಕಿಹೊಳಿ ಭರವಸೆ ನೀಡಿದರು.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆಯನ್ನು ಹಂಚಿಕೊಂಡಿರುವ ಬಿಜೆಪಿ, ನಮ್ಮ ಸರ್ಕಾರವಿದ್ದಾಗ ಪ್ರವಾಹ ಸಂಭವಿಸಿದರೆ ಆಯಾ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ನೀಡುತ್ತು. ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ವಿಪಕ್ಷದ ಶಾಸಕರಿಗೂ ಅನುದಾನ ನೀಡಿದ್ದರು. ಆದರೆ, ಈ ಸರ್ಕಾರದಲ್ಲಿ ವಿಪಕ್ಷವಿರಲಿ, ಆಡಳಿತ ಪಕ್ಷದ ಶಾಸಕರಿಗೂ ಅನುದಾನ ನೀಡುತ್ತಿಲ್ಲ ಎಂದು ಪೋಸ್ಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.