ಬೆಂಗಳೂರು: ಅಪರಿಚಿತ ಕಾರು ಡಿಕ್ಕಿ, ಯುವಕ ದುರ್ಮರಣ
ಮೃತನನ್ನು 21 ವರ್ಷದ ಆಯುಷ್ ಅಯ್ಯಪ್ಪ ಎಂದು ಗುರುತಿಸಲಾಗಿದೆ. ಮಾರತ್ತಹಳ್ಳಿ ನಿವಾಸಿಯಾಗಿದ್ದ ಅಯ್ಯಪ್ಪ, ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂಬುದು ತಿಳಿದುಬಂದಿದೆ.

ಬೆಂಗಳೂರು: ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಕನ್ನಿಂಗ್ ಹ್ಯಾಮ್ ರಸ್ತೆ ಬಳಿ ಸೋಮವಾರ ರಾತ್ರಿ ನಡೆದಿದೆ. ಮೃತನನ್ನು 21 ವರ್ಷದ ಆಯುಷ್ ಅಯ್ಯಪ್ಪ ಎಂದು ಗುರುತಿಸಲಾಗಿದೆ. ಮಾರತ್ತಹಳ್ಳಿ ನಿವಾಸಿಯಾಗಿದ್ದ ಅಯ್ಯಪ್ಪ, ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂಬುದು ತಿಳಿದುಬಂದಿದೆ.
ಸೋಮವಾರ ರಾತ್ರಿ 10.45ರ ಸುಮಾರಿಗೆ ಮನೆಗೆ ಹಿಂದಿರುಗುತ್ತಿದ್ದ ಆಯುಷ್ ಅವರ ದ್ವಿಚಕ್ರ ವಾಹನಕ್ಕೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟುಹೊತ್ತಿಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಈ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



