ರಾಜ್ಯ

ವಾಲ್ಮೀಕಿ ನಿಗಮಕ್ಕಿಂತಲೂ ರಾಜ್ಯದಲ್ಲಿ ಬಹುದೊಡ್ಡ ಹಗರಣ: ಯತ್ನಾಳ್ ಬಾಂಬ್

ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ.

ವಾಲ್ಮೀಕಿ ನಿಗಮಕ್ಕಿಂತಲೂ ರಾಜ್ಯದಲ್ಲಿ ಬಹುದೊಡ್ಡ ಹಗರಣ:  ಯತ್ನಾಳ್ ಬಾಂಬ್
ಬಸನಗೌಡ ಪಾಟೀಲ್ ಯತ್ನಾಳ್
Published On :

ಬೆಂಗಳೂರು: ವಾಲ್ಮೀಕಿ ನಿಗಮದಂತೆ ಕರ್ನಾಟಕದಲ್ಲಿ ಇನ್ನೊಂದು ಕೇಂದ್ರ ಹಗರಣದ ಆಗರವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರ, ಬೆಂಗಳೂರು ಎಂಬ ಒಂದು ಸಂಘಕ್ಕೆ ಸುಮಾರು 600 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ನೀಡಲಾಗಿದೆ. ಈ ಹ್ಯಾಬಿಟೇಟ್ ಕೇಂದ್ರಕ್ಕೆ ಯಾವ ಸಾಂವಿಧಾನಿಕ ಮಾನ್ಯತೆಯೂ ಇಲ್ಲದಿದ್ದರೂ ಮಂತ್ರಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಈ ಸಂಸ್ಥೆಗೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಈ ಹ್ಯಾಬಿಟೇಟ್ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲ, ಇದರಲ್ಲಿ ಕಾರ್ಯನಿರ್ವಹಿಸುತ್ತಿರುವವರು ಸರ್ಕಾರೀ ನೌಕರರೂ ಅಲ್ಲ, ಇಲ್ಲಿ ಎಲ್ಲ ಮಾಯಾ! ಈ ಸಂಸ್ಥೆ ವಿಶೇಷವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾಮಗಾರಿಗಳನ್ನು ಕೈಗೊಂಡಿರುವುದು ಮಂತ್ರಿ ಹಾಗು ಅಧಿಕಾರಿಗಳು ಕೈಜೋಡಿಸಿರುವಂತೆ ಕಾಣಿಸುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದಲೂ ಈ ಹ್ಯಾಬಿಟೆಟ್ ಕೇಂದ್ರಕ್ಕೆ ಹಣ ವರ್ಗಾವಣೆ ಮಾಡಲಾಗಿದೆ. ವಾಲ್ಮೀಕಿ ನಿಗಮದ ಅಕ್ರಮ ಬಯಲಾದ ದಿನದಿಂದ ಸಚಿವ ಜಮೀರ್ ಈ ಹ್ಯಾಬಿಟೇಟ್ ಕೇಂದ್ರದ ಸಭೆಗಳನ್ನು ಪ್ರತಿನಿತ್ಯವೂ ಮಾಡಿ ಏನನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ? ಯಾವ ಕಡತಕ್ಕೆ ಬೆಂಕಿ ಬೀಳಲಿದೆ? ಈ ಹಣ ಯಾವ ಚುನಾವಣೆಗೆ ಬಳಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.