ರಾಜ್ಯ

ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ ಶಿವಕುಮಾರ್ ಪ್ರಶ್ನೆ

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ.

ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ ಶಿವಕುಮಾರ್ ಪ್ರಶ್ನೆ
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ. ನಾನು ಯಾವುದನ್ನೂ ಆತುರದಲ್ಲಿ ಮಾಡುವುದಿಲ್ಲ. ನಾನು ವಿಧೇಯಕ ಮಂಡನೆ ಮಾಡಿದ್ದೇನೆ. ಅವರು ಅದನ್ನು ಸಂಪೂರ್ಣವಾಗಿ ಪರಾಮರ್ಶಿಸಿ ಚರ್ಚೆ ಮಾಡಲಿ. ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದ್ದು, 1.40 ಕೋಟಿ ಜನಸಂಖ್ಯೆ ಇದೆ. ಉತ್ತಮ ಆಡಳಿತದ ಅಗತ್ಯವಿದೆ. ಇಲ್ಲಿ 7 ಸಿಎಂಸಿಗಳಿವೆ. ಮೂಲಸೌಕರ್ಯ ಹಾಗೂ ಆರ್ಥಿಕ ವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡಬೇಕು. ಈ ಬಗ್ಗೆ ವಿರೋಧ ಪಕ್ಷಗಳು ಚರ್ಚೆ ಮಾಡಲಿ. ಅದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ” ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.